ಹುಬ್ಬಳ್ಳಿ
ಅತ್ಯಂತ ಬಡ ಕುಟುಂಬದಲ್ಲಿ ಹುಟ್ಟಿದ್ದರೂ ಸ್ವಪ್ರಯತ್ನ ಹಾಗೂ ನಿರಂತರ ಸಾಧನೆಯಿಂದ ಇಡೀ ವಿಶ್ವವೇ ಗುರುತಿಸುವಂಥ ವ್ಯಕ್ತಿಯಾಗಿ, ಶಕ್ತಿಯಾಗಿ ಬೆಳೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ ಇಂದಿಗೂ ಎಂದೆಂದಿಗೂ ಅನುಕರಣೀಯ ಎಂದು ವಾಕರಸಾ ಸಂಸ್ಥೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ವಾಕರಸಾಸಂಸ್ಥೆ ಗ್ರಾಮಾಂತರ ವಿಭಾಗದ ವಿಭಾಗೀಯ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಉಲ್ಲೇಖಿಸಿರುವಂತೆ ನಾವು ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಮೊದಲು ಅದರಲ್ಲಿ ನಿಗದಿಪಡಿಸಿದ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸುವುದು ಅವಶ್ಯ ಎಂದು ಅವರು ಹೇಳಿದರು.
ವಿಭಾಗಿಯ ಸಂಚಾರ ಅಧಿಕಾರಿ ಎಸ್. ಎಸ್. ಮುಜುಂದಾರ ಮತ್ತು ಇತರ ಅಧಿಕಾರಿಗಳು, ಸಿಬ್ಬಂದಿ ಇದ್ದರು