ಅಮೆರಿಕ: ಟೆಕ್ಸಾಸ್‌ನ ಪ್ರಾಥಮಿಕ ಶಾಲೆಯಲ್ಲಿ 18ರ ಹರೆಯದ ವ್ಯಕ್ತಿಯೊಬ್ಬ ನಡೆಸಿದ ಅತ್ಯಂತ ಅಮಾನವೀಯ ಗುಂಡಿನ ದಾಳಿಯಲ್ಲಿ 18 ಮಕ್ಕಳು ಮತ್ತು ಓರ್ವ ಶಿಕ್ಷಕ ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಈ ಘಟನೆಯ ಕುರಿತು ಮಾಹಿತಿ ನೀಡಿದ್ದು, ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್, ಟೆಕ್ಸಾಸ್ ಗೌವರ್ನರ್‌ಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ. 2012ರಲ್ಲಿ ಕನೆಕ್ಟಿಕಟ್‌ನ ನ್ಯೂಟೌನ್‌ನಲ್ಲಿರುವ ಸ್ಯಾಂಡಿ ಹುಕ್ ಎಲಿಮೆಂಟರಿ ಶಾಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿ ಬಳಿಕ ನಡೆದ ಅತಿ ದೊಡ್ಡ ದುರಂತ ಇದಾಗಿದೆ.
ಇತ್ತೀಚೆಗೆ, ನ್ಯೂಯಾರ್ಕ್ನ ಬಫಲೊ ನಗರದ ಸೂಪರ್ ಮಾರ್ಕೆಟ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದರು. ಎರಡು ವಾರಗಳ ನಂತರ ಮತ್ತೆ ಈ ಘಟನೆ ನಡೆದಿದೆ. ಆ ಘಟನೆಯನ್ನು ‘ಜನಾಂಗೀಯ ಪ್ರೇರಿತ’ ಸಾಮೂಹಿಕ ಗುಂಡಿನ ದಾಳಿ ಎಂದು ಹೇಳಲಾಗಿತ್ತು.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …