ಹುಬ್ಬಳ್ಳಿ; ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗೆ ಆಗ್ರಹಿಸಿ ವಾಯುವ್ಯ ಕರ್ನಾಟಕ ಸಾರಿಗೆ ನೌಕರರು ನಗರದ ಕೇಶ್ವಾಪುರದ ಬಾದಾಮಿನಗರದಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು.
ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಸರ್ಕಾರ ಸ್ಪಂದಿಸುವ ತ್ತ ಮುಂದಾಗುತಿಲ್ಲ ಕಾರಣ ಇದರಿಂದ ತೀವ್ರ ಸ್ವರೂಪದ ಸಮಸ್ಯೆಯಾಗಿದೆ.
೯ ದಿನಗಳಿಂದ ಕೆಎಸ್‌ಆರ್‌ಟಿಸಿ ನೌಕರರು 6ನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಕೂಡಲೇ ತಮ್ಮ ಮುಷ್ಕರ ವಾಪಾಸ್ ಪಡೆಯಬೇಕು,
ಈ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು
ಸರ್ಕಾರಿ ಬಸ್ ಇಲ್ಲದ ಕಾರಣ ಖಾಸಗಿ ಬಸ್ ಹಾಗೂ ಇತರೆ ವಾಹನಗಳ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡುತಿದ್ದಾರೆ. ಅಲ್ಲದೇ
ಗ್ರಾಮಾಂತರ ಹಾಗೂ ಇತರೆ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳು ದೈನಂದಿನ ಶಾಲಾ, ಕಾಲೇಜುಗಳ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಈಗಾಗಲೇ ಕೋವಿಡ್ ಪರಿಣಾಮ ಶಾಲಾ–ಕಾಲೇಜುಗಳಲ್ಲಿ ತರಗತಿ ನಡೆಯುವುದು ತೀರಾ ವಿರಳವಾಗಿದೆ. ಎಸ್ಸೆಸ್ಸೆಲ್ಸಿ ಪಿಯು ಪರೀಕ್ಷೆಗಳು ಸಮೀಪಿಸುತ್ತಿವೆ.
ಪದವಿ ಪರೀಕ್ಷೆ ಈಗಾಗಲೇ ಆರಂಭವಾಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ, ಸಾರ್ವಜನಿಕರ ಅನುಕೂಲಕ್ಕಾಗಿ ನೌಕರರ ಬೇಡಿಕೆ ಕೈಬಿಡಬೇಕು. ಎಂದರು..