ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ. ನರೇಂದ್ರ ಮೋದಿ ನಾಯಕತ್ವದಲ್ಲಿ ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಜನರ ಬಯಕೆ ಕೂಡ ಅವರ ಮುಂದುವರಿಕೆಯೇ ಆಗಿದೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರವಿಲ್ಲ. ನಾಯಕತ್ವ ಬದಲಾವಣೆ ಎನ್ನುವುದು ಕಪೋಲ ಕಲ್ಪಿತ ಎಂದರು.2023ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯತ್ತಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅರುಣ್ ಸಿಂಗ್, ಅವರು ಕಾಮನ್ ಮ್ಯಾನ್, ಜನ ಮತ್ತೆ ಬೊಮ್ಮಾಯಿ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ. ಅವರ ನೇತೃತ್ವದಲ್ಲೇ ಚುನಾವಣೆಗೆ ಹೋಗಬೇಕು ಎನ್ನುವುದು ಜನತೆಯ ಬಯಕೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದರು.
Check Also
ಐಎನ್ಐಎಫ್ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ
Spread the loveಹುಬ್ಬಳ್ಳಿ: ನಗರದ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …