Breaking News

ಸಿಡಿಲು ಬಡಿದು ಇಬ್ಬರ ಸಾವು

Spread the love

ಹುಬ್ಬಳ್ಳಿ: ಗದಗ, ವಿಜಯಪುರ ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಬುಧವಾರ ಸಂಜೆ ಗುಡುಗು, ಸಿಡಿಲಿನ ಮಳೆ ಬಿದ್ದಿದೆ.ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕುದೆರೆಡವು ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಡಿವಾಳರ ಲಿಂಗರಾಜ(26) ಮೃತಪಟ್ಟಿದ್ದಾರೆ.ಜಬಿಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಮೈದೂರು‌ ಗ್ರಾಮದ ಜಮೀನೊಂದರ‌ ಮರದ ಕೆಳಗೆ ಬುಧವಾರ ನಿಂತಿದ್ದ ಕುರಿಗಾಹಿ ಬಸವರಾಜ್ (23) ಸಿಡಿಲು ಬಡಿದು‌ ಮೃತಪಟ್ಟಿದ್ದಾರೆ.ಜೊತೆಯಲ್ಲಿದ್ದ ಅವರ ತಂದೆ ದೇವೇಂದ್ರಪ್ಪ, ಸಹೋದರ ವೀರೇಶ್ ಸೇರಿ ನಾಲ್ಕು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿಯುತ್ತಿದ್ದಂತೆಯೇ ಜೊತೆಯಲ್ಲಿದ್ದವರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಸವರಾಜ್ ಕೊನೆ ಉಸಿರೆಳೆದಿದ್ದಾರೆ ಎಂದು ತಹಶೀಲ್ದಾರ್ ನಂದೀಶ್ ತಿಳಿಸಿದ್ದಾರೆ.


Spread the love

About Karnataka Junction

    Check Also

    ಜಿಲ್ಲಾ ಉಸ್ತುವಾರಿ ಕ್ಷೇತ್ರದಲ್ಲಿಯೇ ಕೈ ಅಭ್ಯರ್ಥಿ ವಿನೋದ ಅಸೂಟಿಗೆ ಹಿನ್ನಡೆ

    Spread the loveಗೆಲುವು ಸಾಧಿಸುತಿದ್ದಂತೆ ದೆಹಲಿಗೆ ತೆರಳಿದ ಪ್ರಲ್ಹಾದ್ ಜೋಶಿ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ನೂತನ ಸಂಸದರು …

    Leave a Reply

    error: Content is protected !!