ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಮೇಜರ್ ಸರ್ಜರಿಗೆ ಕಮಿಷನರ್ ಲಾಬೂರಾಮ್ ವಿವಿಧ ಠಾಣೆಗಳಲ್ಲಿ ಹಲವಾರು ವರ್ಷಗಳಿಂದ ಬೀಡು ಬಿಟ್ಟಿರುವ ಕಾನ್‌ಸ್ಟೆಬಲ್, ಹವಾಲ್ದಾರ್ ಗಳ ಮುನ್ನೂರು ಸಿಬ್ಬಂದಿ ವರ್ಗಾವಣೆ ಕಮಿಷನರ್ ಮಾಡಿದ್ದಾರೆ. ನಾಲ್ಕು ವರ್ಷ ಹಾಗೂ ಅದಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿರುವ ಎಲ್ಲ ಸಿಬ್ಬಂದಿಯ ಮಾಹಿತಿ ನೀಡುವಂತೆ ಎಸಿಪಿ ಹಾಗೂ ಠಾಣೆಗಳ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ. ಅವಳಿ ನಗರದಲ್ಲಿ ನಾಲ್ಕು ಸಂಚಾರ ಪೊಲೀಸ್ ಠಾಣೆಗಳಿದ್ದು, ಅವುಗಳಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ 5 ವರ್ಷಗಳಿಗಿಂತಲೂ ಹೆಚ್ಚು ಕಾಲ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿಂದಲೇ ವೃತ್ತಿ ಬದುಕು ಆರಂಭಿಸಿರುವ ಅವರು, ಹವಾಲ್ದಾರ್, ಎಎಸ್ಐ, ಎಸ್ಐ ಆಗಿ ಪದೋನ್ನತಿ ಹೊಂದಿದ್ದಾರೆ. ಕಮಿಷನರೇಟ್‌ನ 14 ಠಾಣೆಗಳಲ್ಲಿಯೂ ನಾಲ್ಕು ವರ್ಷಕ್ಕಿಂತ ಮೇಲ್ಟಟ್ಟವರಿದ್ದಾರೆ.
gcsteam
September 23, 2022
categorize, ಜಿಲ್ಲೆ
192 Views