Breaking News

ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ಕೊಲೆ

Spread the love

ಕೋಲಾರ: ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಳಬಾಗಿಲಿನಲ್ಲಿ‌ ನಡೆದಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಆಪ್ತ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ಕೊಲೆಯಾದವರು.
ಇಂದು ಬೆಳಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತರ ಗುಂಪೊಂದು ಜಗನ್ ಮೋಹನ್ ಅವರ ಮೇಲೆ ದಾಳಿ ಮಾಡಿ ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎನ್ನಲಾಗ್ತಿದೆ.
rಜಗನ್ ಮೋಹನ್ ಮೃತ ದೇಹತೀವ್ರವಾಗಿ ಗಾಯಗೊಂಡಿದ್ದ ಮೋಹನ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಡಿವೈಎಸ್​​ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Karnataka Junction

    Check Also

    ಲಾ & ಆರ್ಡರ್ ಎಡಿಜಿಪಿ ಆರ್‌ ಜೀತೇಂದ್ರ ಅಸಮಾಧಾನ

    Spread the loveಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಕೊಲೆ ಹಿನ್ನೆಲೆಯಲ್ಲಿ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. …

    Leave a Reply

    error: Content is protected !!