Breaking News

ಒಂದು ತಿಂಗಳು ಲಾಕ್ ಡೌನ್ ವಿಸ್ತರಣೆ- ಬಡವರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ ಕುಮಾರಸ್ವಾಮಿ

Spread the love

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಅನಿವಾರ್ಯ. ಒಂದು ತಿಂಗಳ ಕಾಲ ಲಾಕ್​ಡೌನ್​ ವಿಸ್ತರಿಸಿ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪಕ್ಷದ ವರಿಷ್ಠ ಎಚ್​ ಡಿ ದೇವೇಗೌಡರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಮೇ 24 ರ ಬಳಿಕ ಲಾಕ್​ಡೌನ್​ ವಿಸ್ತರಣೆ ಮಾಡುವುದು ಅನಿವಾರ್ಯ. ಲಾಕ್​ಡೌನ್​ ವಿಸ್ತರಿಸದಿದ್ದರೆ ದೊಡ್ಡ ದೊಡ್ಡ ಅನಾಹುತ ಆಗಲಿದೆ. ಹೀಗಾಗಿ ಲಾಕ್​ಡೌನ್​ ವಿಸ್ತರಿಸುವುದು ಸೂಕ್ತ, ಇದರ ಜೊತೆಗೆ ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.ಲಾಕ್​ಡೌನ್​ ವಿಸ್ತರಣೆ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದರುರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿಲ್ಲ. ಕೋವಿಡ್ ಟೆಸ್ಟ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು-ನೋವುಗಳು ಹೆಚ್ಚಾಗುತ್ತವೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ಎಡವಟ್ಟು ಮಾಡುತ್ತೀರಿ. ಈಗಾಗಲೇ ಕೋವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ಸರ್ಕಾರಕ್ಕೆ ಎಂದರು.ರಾಜ್ಯದ ಜನರ ಜೀವದ ಜೊತೆ ಆಟ ಆಡಬೇಡಿ. ಲಾಕ್ ಡೌನ್​ ವಿಸ್ತರಣೆ ಮಾಡದೆ ಇದ್ದರೆ ಮುಂದೆ ದೊಡ್ಡ ಅನಾಹುತ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ ಹೆಚ್​ಡಿಕೆ,
ಸರ್ಕಾರ ಕೋವಿಡ್ ಟೆಸ್ಟ್ಅನ್ನು ಹಲವು ಕಡೆ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಸಂಭವಿಸುತ್ತದೆ. ಹೊರ ನೋಟಕ್ಕೆ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಹೊರಟಿದೆ. ತಾತ್ಕಾಲಿಕವಾಗಿ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಎಡವಟ್ಟು ಮಾಡುತ್ತಿರಾ?, ಇದರಿಂದ ರಾಜ್ಯದಲ್ಲಿ ಕೋವಿಡ್ ಕೇಸ್ ಗಳು ಹೆಚ್ಚಾಗುತ್ತವೆ ಎಂದು ಮುನ್ನೆಚ್ಚರಿಕೆ ನೀಡಿದರು.ಸರ್ಕಾರದ ಮಂತ್ರಿಗಳು ವಾಸ್ತವಿಕ ಹೇಳಿಕೆ ಕೊಡುತ್ತಿಲ್ಲ. ಕೆಲವರು ಲಘುವಾದ ಹೇಳಿಕೆಯನ್ನು ಸಚಿವರು ಕೊಡುತ್ತಿದ್ದಾರೆ. ಇಲ್ಲಿಯವರೆಗೆ ನೀವು ತಪ್ಪು ಮಾಡಿದ್ದಿರಿ, ಜನಗಳ ನೋವು ನೋಡಿದ್ದಿರಿ. ಮತ್ತೆ ಆ ತಪ್ಪು ಮಾಡಬೇಡಿ. ಕೇವಲ ಸಭೆ ಮಾಡಿದರೆ ಯಾವುದೇ ಪ್ರಯೋಜನ ಇಲ್ಲ‌. ಮೀಟಿಂಗ್ ಮಾಡಿದರೆ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಮೊದಲು ವ್ಯಾಕ್ಸಿನ್ ಬಂದಾಗ ತೆಗೆದುಕೊಳ್ಳಬೇಡಿ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿದೆ‌. ಈಗ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧವೂ ಕುಮಾರಸ್ವಾಮಿ ಕಿಡಿ ಕಾರಿದರು.å


Spread the love

About Karnataka Junction

[ajax_load_more]

Check Also

ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ

Spread the love  ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …

Leave a Reply

error: Content is protected !!