ನವಲಗುಂದ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ 28 ರಂದು ಶನಿವಾರ ಬೆ 11 ಕ್ಕೆ ಪಟ್ಟಣದ ಗವಿಮಠದ ಶ್ರೀ ಸಿದ್ದಲಿಂಗೇಶ್ವರ ದಾಸೋಹ ಭವನದಲ್ಲಿ ಜರುಗಲಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ದೇವರಾಜ ಕರಿಯಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದಗ್ರಹಣ ಕಾರ್ಯಕ್ರಮಕ್ಕೆ ದಿವ್ಯ ಸಾನಿದ್ಯ ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ವಹಿಸಲಿದ್ದು. ಕೈಮಗ್ಗ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಕಾರ್ಯಕ್ರಮ ಉದ್ಟಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾಪ್ರಸಾದ ಆಗಮಿಸಲಿದ್ದು. ವೀರಶೈವ-ಲಿಂಗಾಯತ ಮಹಾಸಭಾದ ತಾಲೂಕಾ ಅಧ್ಯಕ್ಷ ಪರಶುರಾಮ ಹಕ್ಕರಕಿ ಅಧ್ಯಕ್ಷತೆ ವಹಿಸುವರು.
ಇದೇ ಸಂದರ್ಭದಲ್ಲಿ ಗಣ್ಯರಿಗೆ ಸನ್ಮಾನ ಹಾಗೂ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಗೌರವಾನ್ವಿತ ಅತಿಥಿಗಳಾಗಿ ವೀರಶೈವ ಲಿಂಗಾಯತ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸೀರಮರದ, ಮಾಜಿ ಶಾಸಕ ಆರ್.ಬಿ.ಶಿರಿಯಣ್ಣವರ, ಉಚ್ಚ ನ್ಯಾಯಾಲಯದ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಸಿ.ಎಸ್.ಪಾಟೀಲ, ಕೆ.ಸಿ.ಸಿ ಬ್ಯಾಂಕ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ, ಕೆ.ಪಿ.ಸಿ.ಸಿ ಸದಸ್ಯ ವಿಜಯ ಕುಲಕರ್ಣಿ, ಜಿ.ಪಂ ಮಾಜಿ ಸದಸ್ಯ ಎ.ಬಿ.ಹಿರೇಮಠ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು.
ಕಾರಣ ಪದಗ್ರಹಣ ಸಮಾರಂಭ ಹಾಗೂ ಗಣ್ಯರ ಸನ್ಮಾನಕ್ಕೆ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Check Also
ಎಪಿಎಂಸಿಗೆ ಶಾಸಕ ಟೆಂಗಿನಕಾಯಿ ಭೇಟಿ, ವರ್ತಕರ ಸಮಸ್ಯೆ ಚರ್ಚೆ
Spread the loveಹುಬ್ಬಳ್ಳಿ: ಇಲ್ಲಿಯ ಅಮರಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಬುಧವಾರ ಭೇಟಿ ನೀಡಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ …