ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಬುಧವಾರ ಪೊಲೀಸ್ ಭದ್ರತೆಯಲ್ಲಿ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ
ಪಾಲಿಕೆಯ ಅಧಿಕಾರಿಗಳು ಡೆಮಾಲಿಷನ್ ಕಾರ್ಯವನ್ನು ಕಾರ್ಯಾಚರಣೆ ನೇತೃತ್ವದಲ್ಲಿ ನಡೆಸಲಾಗಿದ್ದು, ಬೆಳಿಗ್ಗೆಯಿಂದಲೇ ಸಾಕಷ್ಟು ವಿರೋಧವಾಗಿತ್ತು.
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಬಂದೋಬಸ್ತ್ ನೀಡಿದ್ದು ಈಗಾಗಲೇ ಅತಿಕ್ರಮಣ ಮಾಡಿಕೊಂಡ ಕುರಿತು ಎಚ್ಚರಿಕೆ ನೋಟಿಸ್ ಸಹ ಜಾರಿ ಮಾಡಲಾಗಿತ್ತು.ಈ ನಡುವೆ
ಮನೆಯ ಮಾಲಿಕರುಗಳು ನಮ್ಮ ವಸ್ತುಗಳನ್ನು ತೆಗೆಯಲು ಅವಕಾಶವನ್ನು ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದು , ಈಗಾಗಲೇ ಅನೇಕ ಭಾರಿ ಸಮಯಾಕಾಶ ನೀಡಿದ್ದು ಇರುತ್ತದೆ. ಕಾರಣ ನ್ಯಾಯಾಲಯದ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ತಿಳಿಸಿ ಕಾರ್ಯಾಚರಣೆ ಮುಂದುವರಿದಿದೆ.
