ಬೆಂಗಳೂರು; ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫರೀಕ್ಷೆ ಫಲಿತಾಂಶವನ್ನು ಮೇ 19 ರಂದು ಬಿಡುಗಡೆ ಮಾಡಲಾಗುವುದು ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಮಾಹಿತಿ ನೀಡಿದರು.
ಮಾರ್ಚ್ 28 ರಿಂದ ಏಪ್ರಿಲ್ 11 ರವರಗೆ 2022 ನೇ ಸಾಲಿನ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇನ್ನೂ ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿತ್ತು. ಆದರೆ ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಭವಾಗಿತ್ತು. ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಮೌಲ್ಯ ಮಾಪನದಲ್ಲಿ ಸಣ್ಣಪುಟ್ಟ ಕೆಲವು ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಸುಮಾರು 234 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆದಿದ್ದು, ಸುಮಾರು 63,796 ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.
*ಫಲಿತಾಂಶ ಚೆಕ್ ವಿಧಾನ*
– ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಗೆ ಅಥವಾ karresults.nic.in ಗೆ ಭೇಟಿ ನೀಡಿ.
– ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್ ಮಾಡಿ.
– ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
– ಆಗ ನಿಮಗೆ ಫಲಿತಾಂಶ ಪೇಜ್ ಓಪನ್ ಆಗುತ್ತದೆ.
– ನೀವು ಫಲಿತಾಂಶದ ಪ್ರತಿಯನ್ನ ಡೌನ್‌ಲೋಡ್ ಮಾಡಿಕೊಂಡು ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಅವರ ರಿಜಿಸ್ಟರ್ ಮೊಬೈಲ್ ನಂಬರ್‌ಗೂ ಸಹ ಸಂದೇಶದ ಮೂಲಕ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕಳುಹಿಸುವ ಅವಕಾಶ ಇದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ಬರೆದು, ಪಾಸ್ ಮಾಡಿಕೊಳ್ಳಬಹುದು.
