ಹುಬ್ಬಳ್ಳಿ: ಭಾರೀ
ತೀವ್ರ ಕುತೂಹಲ ಮೂಡಿಸಿದ್ದ ನವಲಗುಂದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದದಿಂದ ಅಧ್ಯಕ್ಷ ಸ್ಥಾನಕ್ಕೆ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಾವತಿ ಪೂಜಾರ. ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಮಹಾಂತೇಶ ಕಲಾಲ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗೊಲ್ಲರ ನಾಮ ಪತ್ರ ಸಲ್ಲಿಸಿದ್ದರು.
ಚುನಾವಣಾ ಪ್ರಕ್ರಿಯಲ್ಲಿ ಏನಾದರೂ ಅಚ್ಚರಿ ಪಡುವಂತಹ ನಾಟಕೀಯ ಬೆಳವಣಿಗೆ ನಡೆಯಬಹುದೆಂಬ ನಿರೀಕ್ಷೆ ಹುಸಿಯಾಯಿತು. ಕಾಂಗ್ರೆಸ್ ಪಕ್ಷದ ಸದಸ್ಯ ಅಪ್ಪಣ್ಣ ಹಳ್ಳದ ಅಧ್ಯಕ್ಷ ಸ್ಥಾನಕ್ಕೆ 13 ಸದಸ್ಯರು ಕೈ ಎತ್ತುವುದರ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು. ಅದರಂತೆ ಕಾಂಗ್ರೆಸ್ ಪಕ್ಷದ ಸದಸ್ಯೆ ಪದ್ಮಾವತಿ ಪೂಜಾರ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿಯಿಂದ ಸ್ಪರ್ದಿಸಿದ ಮಹಾಂತೇಶ ಕಲಾಲ ಹಾಗೂ ಜ್ಯೋತಿ ಗೊಲ್ಲರ ತಲಾ 6 ಮತಗಳನ್ನು ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ ಅನೀಲ ಬಡಿಗೇರ ಕಾರ್ಯನಿರ್ವಹಿಸಿದರು. ಸಿ.ಪಿ.ಐ ಸಿ.ಜಿ.ಮಠಪತಿ ನೇತ್ರತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ ಏರ್ಪಡಿಸಲಾಗಿತ್ತು.
ಮತ್ತೇ ಪುರಸಭೆ ಗದ್ದುಗೆ ಹಿಡಿದ ಕಾಂಗ್ರೆಸ್ ಕಾರ್ಯಕರ್ತರು ಬಣ್ಣ ಏರಚುವು ಮೂಳಕ ವಿಜಯೋತ್ಸವ ಆಚರಿಸಿದರು. ಅಧ್ಯಕ್ಷರಾಗಿ ಮಾತನಾಡಿದ ಅಪ್ಪಣ್ಣ ಹಳ್ಳದ ನಗರ ಸರ್ವಾಂಗೀಣ ಅಭಿವೃದ್ದಿಗಾಗಿ ಜನ ಪ್ರತಿನಿಧಿಗಳ ವಿಶ್ವಾಸ ಪಡೆದುಕೊಂಡು ಮಾದರಿ ನಗರವನ್ನು ಮಾಡುವುದಾಗಿ ಹೇಳಿದರು.
ಚುನಾವಣಾ ಪ್ರಕ್ರಿಯಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರುಗಳಾದ ಪ್ರಕಾಶ ಶಿಗ್ಲಿ, ಹುಸೇನಬಿ ಧಾರವಾಡ, ಹನಮಂತ ವಾಲ್ಮೀಕಿ, ಬಾಬಾಜಾನ ಮಕಾನದಾರ ಗೈರು ಹಾಜರಾಗಿದ್ದರು.
