ನವದೆಹಲಿ: ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನತೆ ಮತ್ತೆ ಬೆಲೆ ಏರಿಕೆ ಶಾಕ್ ಆಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.
ಈ ಹಿಂದೆ ಮಾರ್ಚ್ 22 ರಂದು ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 50 ರೂ.ಗಳ ಹೆಚ್ಚಳ ಮಾಡಲಾಗಿದ್ದು, ಜನ ಸಾಮಾನ್ಯರು ಪರಿತಪಿಸುವಂತಾಗಿದೆ. ಈ ಬೆಲೆ ಇಂದಿನಿಂದಲೇ ಜಾರಿಗೆ ಬಂದಿದ್ದು, ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್ 999.50 ರೂ. ಗೆ ಲಭ್ಯವಾಗುತ್ತಿದೆ. ಇದರಿಂದಾಗಿ ಜನರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ
Check Also
ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ
Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …