ಹುಬ್ಬಳ್ಳಿ: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗಬೇಕಾಗಿದೆ. ಯಾವ ಪಕ್ಷದ ಸರ್ಕಾರ ಇದ್ದರೂ ಈ ಭಾಗದವರು ಮಲತಾಯಿ ಧೋರಣೆಗೆ ಒಳಗಾಗಿದ್ದಾರೆ. ಉತ್ತರದ ಪ್ರಮುಖ ನೀರಾವರಿ ಯೋಜನೆಗಳು ಪೂರ್ಣಗೊಂಡಿಲ್ಲ ಎಂದರು.
ಸಿಎಂ ಬದಲಾವಣೆ ವಿಚಾರ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದಾಗಿದೆ ಎಂದು ಎಸ್.ಆರ್.ಪಾಟೀಲ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಚರ್ಚೆ ಆಗುವ ಕುರಿತು ಬಹಿರಂಗವಾಗಿ ಯಾರು ಚರ್ಚೆ ಮಾಡಬಾರದು ಅಂತಾ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಸುರ್ಜೆವಾಲ್ ಎಚ್ಚರಿಕೆ ನೀಡಿದ್ದಾರೆ ಎಂದ ಅವರು ಮುಖ್ಯಮಂತ್ರಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ತ್ಯಾಗದ ಮಾತು ಹೇಳಿದ್ದಾರೆ ಅದು ಅವರ ಅನಿಸಿಕೆ ಎಂದರು
