ಅರುಣ್ ಸಿಂಗ್, ಜೆ.ಪಿ.ನಡ್ಡಾ ಭೇಟಿ ಮಾಡಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಅರವಿಂದ ಬೆಲ್ಲದ

Spread the love

ನವದೆಹಲಿ; ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಬಂದು ಮೂರು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿರುವ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತವಾಗುತ್ತಿರುವ ಅರವಿಂದ ಬೆಲ್ಲದ ದಿಢೀರನೇ ಇಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಅವರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಭೇಟಿ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಅಲ್ಲದೆ, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು ಅವರು ಕರ್ನಾಟಕಕ್ಕೆ ಆಗಮಿಸುವ ಮೊದಲೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಅವರು ರಾಜ್ಯ ಪ್ರವಾಸದ ವೇಳೆ ಭೇಟಿ ಆಗುವುದು ಮತ್ತು ದೂರು ನೀಡುವುದು ಕಷ್ಟ ಆಗಬಹುದೆಂಬ ಕಾರಣಕ್ಕೆ ಅರವಿಂದ ಬೆಲ್ಲದ ದೆಹಲಿ ಮೂಲಕವೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈಗಾಗಲೇ ಬಿ.ಎಲ್. ಸಂತೋಷ್ಬ ಅವರನ್ನೂ ಭೇಟಿಯಾಗಿದ್ದ ಅರವಿಂದ ಬೆಲ್ಲದ ಸೋಮವಾರ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ
ಭೇಟಿ ಮಾಡಿದ್ದಾರೆ. ಅರುಣ್ ಸಿಂಗ್ ಭೇಟಿ ವೇಳೆ ಒಂದು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾರೆ ಇನ್ನೊಂದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಕುತೂಹಲ ಮೂಡಿಸಿದ ಸಭೆ
ವಾರದ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಬಯಸಿದರೆ ರಾಜೀನಾಮೆ ನೀಡುತ್ತೇನೆ ಎಂದಿದ್ದರು. ಈಗ ಯಡಿಯೂರಪ್ಪ ಅವರೇ ‘ಉಳಿದ ಎರಡು ವರ್ಷವೂ ನಾನೇ ಸಿಎಂ ಆಗಿ ಮುಂದುವರೆಯುವೆ ಎಂದಿದ್ದಾರೆ. ಮುಖ್ಯಮಂತ್ರಿ ಆಗಿರುವವರೇ ಸ್ವತಃ ಗೊಂದಲ ಸೃಷ್ಟಿಸುತ್ತಿದ್ದಾರೆ. ಸರ್ಕಾರದಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪವೂ ಹೆಚ್ಚಾಗಿದೆ. ಆದುದರಿಂದ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಬದಲಾವಣೆಯ ಪ್ರಸ್ತಾಪ ಇಟ್ಟಿರುವ ಅರವಿಂದ ಬೆಲ್ಲದ ಎನ್ನಲಾಗಿದೆ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply