ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಗೊಂದಲ ನಿವಾರಣೆ ಕುರಿತಂತೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಕೋವಿಡ್ ಉಸ್ತುವಾರಿ ಸಚಿವರ ಜೊತೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಲಸಿಕೆ ಕೊರತೆ ಬಗ್ಗೆ ಇರುವ ಎಲ್ಲ ಗೊಂದಲಗಳ ಕುರಿತು ಸ್ಪಷ್ಟನೆ ನೀಡಲಿದ್ದಾರೆ.
ಈಗಾಗಲೇ ಆರೋಗ್ಯ ಇಲಾಖೆ ಮುಂದಿನ ಆದೇಶದವರೆಗೆ 18-44ರ ವಯೋಮಾ ನದವರಿಗೆ ಲಸಿಕೆ ನೀಡಿಕೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಆದರೂ 45 ವರ್ಷ ಮೇಲಿನವರಿಗೆ ಲಸಿಕೆ ಸಿಗುತ್ತಿಲ್ಲ. ಮೊದಲನೇ ಡೋಸ್ ಪಡೆದವರು ಎರಡನೇ ಡೋಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಬಹುತೇಕ ಕಡೆ ಲಸಿಕೆ ಖಾಲಿ ಎನ್ನುವ ನಾಮಫಲಕ ಕಂಡುಬರುತ್ತಿದೆ.18-44 ವಯೋಮಾನದವರಿಗೆ ಲಸಿಕೆ ನೀಡಿಕೆಯನ್ನು ಸ್ಥಗಿತಗೊಳಿಸುವ ಕುರಿತು ಸಿಎಂ ಅಧಿಕೃತ ಘೋಷಣೆ ಮಾಡಲಿದ್ದು, ಮುಂದಿನ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಲಾಕ್ಡೌನ್ ನಂತರವೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಇನ್ನಷ್ಟು ಬಿಗಿ ಕ್ರಮದ ಘೋಷಣೆ ಸಾಧ್ಯತೆ ಇದೆ. ಇದರ ಜೊತೆಯಲ್ಲಿ ಶ್ರಮಿಕ ವರ್ಗದ ನೆರವಿಗೆ ಏನಾದರೂ ಯೋಜನೆಗಳನ್ನು ಪ್ರಕಟಿಸುತ್ತಾರೆ ಎನ್ನಲಾಗಿದೆ.
.