ಕೊರೊನಾಗೆ ಬಲಿಯಾದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್- ಸಿಎಂ ಯಡಿಯೂರಪ್ಪ ಸಂತಾಪ

Spread the love

ಬೆಂಗಳೂರು: ಹಿರಿಯ ಪತ್ರಕರ್ತ ಈ ಭಾನುವಾರ ಪತ್ರಿಕೆ ಸಂಪಾದಕರು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾಗೆ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ನಗರದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಹಾದೇವ ಪ್ರಕಾಶ್ ಮಾಧ್ಯಮ ವಲಯದಲ್ಲಿ ರಾಜಕೀಯ ವಿಶ್ಲೇಷಕರಾಗಿ ಗುರುತಿಸಿಕೊಂಡಿದ್ದರು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅತಿಥಿಯಾಗಿ ಚರ್ಚೆ, ಸಂವಾದ ಕಾರ್ಯಕ್ರಮ ಮತ್ತು ಪತ್ರಿಕೆಗಳಲ್ಲಿ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಅಂಕಣಗಳನ್ನು ಮಹಾದೇವ ಪ್ರಕಾಶ್ ಬರೆಯುತ್ತಿದ್ದರು.
ಸಂತಾಪ- ಹಿರಿಯ ಪತ್ರಕರ್ತ ಮಹದೇವ ಪ್ರಕಾಶ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವಾರು ಸಚಿವರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.


Spread the love

Leave a Reply

error: Content is protected !!