ಹುಬ್ಬಳ್ಳಿ: ಯಾರ ಯಾರೋ ಚರ್ಚೆ ಮಾಡುವುದಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ನಿಮಗೆ ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಸಿಎಂ ಸ್ಥಾನಕ್ಕೆ ಉತ್ತರ ಕರ್ನಾಟಕ ಅಭ್ಯರ್ಥಿ ಮುನ್ನೆಲೆಗೆ ಬಂದಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ ಅಲ್ಲದೇ ಇದರ ಬಗ್ಗೆ ಮಾತನಾಡಿದ್ದಾರೋ ಅವರನ್ನೇ ಕೇಳಿ. ನಾನು ಇದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಅವರು ಹೇಳಿದರು.
ಕೋವಿಡ್ ಮೂರನೆ ಅಲೆಯ ಸಿದ್ಧತೆ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದೇನೆ ಎಲ್ಲ ರೀತಿಯಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಇನ್ನೂ ಅವಳಿನಗರದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅವಳಿನಗರದಲ್ಲಿ ಕ್ರೈಂ ಪ್ರಕರಣ ಹೆಚ್ಚಾಗುತ್ತಿದ್ದು,ಈ ಬಗ್ಗೆ ಪೊಲೀಸ್ ಕಮೀಷನರ್ ಜೊತೆಗೆ ಮಾತನಾಡಿದ್ದೇನೆ. ಕ್ರೈಂಗಳಲ್ಲಿ ಭಾಗಿಯಾಗುವವರ ವಿರುದ್ಧ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …