Breaking News

ಎಲೆಕ್ಷನ್ ಗೂ ಮುನ್ನ ವಾತಾಪಿಯಲ್ಲಿ ಟಗರಿಗೆ ಹೆಚ್ಡಿಕೆ ಟಕ್ಕರ್

Spread the love

ಬಾಗಲಕೋಟೆ : 10 ಕೆಜಿ ಉಚಿತ ಕಟ್ಟು ಕೊಟ್ಟು ನಾವು ನಿಮ್ಮನ್ನು ಬಿಕಾರಿ ಮಾಡುವುದಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟಕ್ಕರ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ನಡೆದ ಜೆಡಿಎಸ್‍ ‘ಜನತಾ ಜಲಧಾರೆ ಸಂಕಲ್ಪ ಸಮಾವೇಶ’ದಲ್ಲಿ ಸೋಮವಾರ ಮಾತನಾಡಿರುವ ಅವರು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಜಾರಿಗೆ ತರುತ್ತೇವೆ. ರಾಜ್ಯದಲ್ಲಿ ಖಾಸಗಿ ಶಾಲೆಗಳ ಹಾವಳಿ ಹೆಚ್ಚಾಗಿದ್ದು, ಶಿಕ್ಷಣ ಮಾರಾಟದ ಸರಕಾಗಿದೆ. ನಾವು ಹಳ್ಳಿ ಹಳ್ಳಿಯಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ ತೆರೆಯುತ್ತೇವೆ. ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ನಮ್ಮ ಪಂಚರತ್ನಗಳಲ್ಲೊಂದಾಗಿದೆ ಎಂದು ಎಚ್‍ಡಿಕೆ ಹೇಳಿದ್ದಾರೆ. ನಾವು ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟು ನಿಮ್ಮನ್ನು ಬಿಕಾರಿ‌ ಮಾಡುವುದಿಲ್ಲವೆಂದು ಇದೇ ವೇಳೆ ಸಿದ್ದರಾಮಯ್ಯಗೆ ಎಚ್‍ಡಿಕೆ ಟಕ್ಕರ್ ನೀಡಿದರು. ಸೀರೆ ಕೊಡ್ತಾರಂತೆ ಸೀರೆ… ಇವರು ನಿಮ್ಮ ಯಜಮಾನರು ನೋಡಿ.. ನಿಮ್ಮ ಯಜಮಾನರು ಸೀರೆ ಕೊಡಿಸದ ಸ್ಥಿತಿಗೆ ಇವರು ತಂದಿಟ್ಟಿದ್ದಾರೆ ಅಂತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬಾದಾಮಿಯಲ್ಲಿ ಜೆಡಿಎಸ್​ ಅಭ್ಯರ್ಥಿಯನ್ನಾಗಿ ಹನುಮಂತ ಮಾವಿನ ಮರದ್​ ಅವರ ಹೆಸರನ್ನು ಎಚ್‍ಡಿಕೆ ಘೋಷಣೆ ಮಾಡಿದ್ದಾರೆ. ಸದ್ಯ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ನಮ್ಮ ಅಭ್ಯರ್ಥಿಯಾಗಿ ಸರಳ ವ್ಯಕ್ತಿತ್ವದ ಹನುಮಂತ ಕಣಕ್ಕಿಳಿಯಲಿದ್ದಾರೆ. ಅವರಲ್ಲಿರುವ ಸರಳತೆ-ಬದ್ಧತೆ ಮೆಚ್ಚುವಂತಹದ್ದು. ಇಂತಹ ನಾಯಕರು ಇಂದು ರಾಜ್ಯಕ್ಕೆ ಬೇಕಾಗಿದೆ. ನಿಮ್ಮ ನೋವಿಗೆ ಸ್ಪಂದಿಸುವ ಸರ್ಕಾರ ತರಲು ಹೊರಟಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘದ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Spread the love

About gcsteam

    Check Also

    ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ*

    Spread the loveಹುಬ್ಬಳ್ಳಿ ಮಾ.3: ಇಂದು ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳಿಗೆ …

    Leave a Reply