ಹುಬ್ಬಳ್ಳಿ : ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡು ಬಾರ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಹುಬ್ಬಳ್ಳಿಯ ಶಿರೂರ ಪಾರ್ಕ್‌ನ ಸಿಲ್ವರ್ ಸ್ಟೋನ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.
ಬಾರ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ನಡುವೆ ಗಲಾಟೆ ಆಗಿದೆ. ಗಲಾಟೆ ಬಿಡಿಸಲು ಮುಂದಾದ ಸಿಬ್ಬಂದಿಗೆ ಮೂವರು ಸೇರಿ ಒಡೆದ ಬಾಟಲಿಯಿಂದ ಹಲ್ಲೆ ನಡೆಸಿ ಹತ್ಯೆಗೆ ಪ್ರಯತ್ನಿಸಿದ್ದಾರೆ. ಹೊಸೂರಿನ ಸುಪ್ರೀತ್, ಆದಿತ್ಯ ಹಾಗೂ ಪ್ರಜ್ವಲ್ ಎಂಬಾತ ಸೇರಿ ನಾಲ್ವರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಗೊಂಡು ಚಿಕಿತ್ಸೆ ಪಡೆದ ಬಾರ್ ಸಿಬ್ಬಂದಿಆರೋಪಿಗಳು ಸ್ನೇಹಿತರ ಜೊತೆ ಮದ್ಯ ಸೇವನೆ ಮಾಡುತ್ತಿದ್ದಾಗ ಪಕ್ಕದ ಟೇಬಲ್‌ನಲ್ಲಿ ಕುಳಿತವರ ಜೊತೆ ಜಗಳ ಮಾಡಿ ಬಾಟಲಿ ಒಡೆದು ಹಲ್ಲೆಗೆ ಯತ್ನಿಸಿದ್ದರು. ಬಾರ್ ವ್ಯವಸ್ಥಾಪಕ ಮಂದಾರ್ ಮತ್ತು ಸಿಬ್ಬಂದಿ ಮಿಥುನ್ ಅದನ್ನು ತಡೆಯಲು ಮುಂದಾದಾಗ ಅಶ್ಲೀಲವಾಗಿ ಬೈದು ಅವರ ಮೇಲೆಯೇ ಹಲ್ಲೆ ನಡೆಸಿದ್ದಾರೆ.
ಅದನ್ನು ತಪ್ಪಿಸಲು ಹೋದ ಸಿಬ್ಬಂದಿ ರವಿ, ಮಂಜುನಾಥ ಮತ್ತು ಸಂತೋಷ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಸಂತೋಷ ಅವರ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ. ಬಾರ್‌ನಲ್ಲಿ ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …