Breaking News

ಎಚ್ ಡಿಕೆ ಮಾಧ್ಯಮ ಸಲಹೆಗಾರ ಸದಾನಂದ ನಿಧನ

Spread the love

ಬೆಂಗಳೂರು; ಮಾಜಿ ಮುಖ್ಯಮಂತ್ರಿ
ಎಚ್ ಡಿ ಕುಮಾರಸ್ವಾಮಿ ಅವರ ಮಾದ್ಯಮ ಸಲಹೆಗಾರ ಕೆ.ಸಿ. ಸದಾನಂದ ಹೃದಯಾ ಘಾತದಿಂದ ನಿಧನರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರುಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರ ನಂಬಿಕಸ್ಥನಾಗಿದ್ದ ಸದಾನಂದ, ಈಗಲೂ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.
ಸಂತಾಪ:
ಕೆ.ಸಿ.ಸದಾನಂದ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.


Spread the love

About Karnataka Junction

[ajax_load_more]

Check Also

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ*

Spread the loveಹುಬ್ಬಳ್ಳಿ : ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ 2024 ರ ಯುವನಿಧಿ ಯೋಜನೆಯ ನೋಂದಣಿ …

Leave a Reply

error: Content is protected !!