ಹುಬ್ಬಳ್ಳಿ; ಮುಂದಿನ ದಿನಗಳಲ್ಲಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆ.ಎಲ್.ಎಮ್ ಆಕ್ಸಿವಾ ಫಿನ್ವೆಸ್ಟ್ ಕಂಪನಿಯ ಶಾಖೆಗಳನ್ನು ತೆರೆಯುವುದಾಗಿ
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಜ್ ರವಿ ಹೇಳಿದರು.
ನಗರದ ಹೊಸೂರನಲ್ಲಿಂದು ಕೆ.ಎಲ್.ಎಮ್ ಆಕ್ಸಿವಾ ಫಿನ್ವೆಸ್ಟ್ ವಲಯ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜೊತೆಗೆ ಗ್ರಾಹಕ ಸ್ನೇಹಿ ಯೋಜನೆ ಜಾರಿಮಾಡಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಉದ್ಘಾಟನೆ ನೆರವೇರಿಸಿ ಮಾತನಾಡಿ,
ಕೆ.ಎಲ್.ಎಂ ಆಕ್ಸಿವಾ ಇನ್ನಷ್ಟು ಶಾಖೆಗಳನ್ನು ಹೊಂದಿ ಜನರಿಗೆ ಉತ್ತಮ ಸೇವೆ ನೀಡಲಿ ಎಂದರು
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಸದಸ್ಯೆ ರೂಪಾ ಶೆಟ್ಟಿ, ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
Check Also
ವಿಧಾನ ಪರಿಷತ್ ಮಾಜಿ ಸದಸ್ಯೆ ಸಾವಿತ್ರಮ್ಮ ಗುಂಡಿ ನಿಧನ
Spread the loveಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಯುಕ್ತ ಜನತಾ ದಳ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ , ವಕೀಲರು ಹಾಗೂ …