Breaking News

ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ಸೂಚನೆ- ಗೃಹ ಸಚಿವ ಬೊಮ್ಮಾಯಿ

Spread the love

ಹುಬ್ಬಳ್ಳಿ; ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾಗಿ ಲಾಕ್ ಜಾರಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಶುಕ್ರವಾರ ಕೇಶ್ವಾಪುರ ದಲ್ಲಿರುವ ಮೃತ ಕಾಡಯ್ಯ ಹಿರೇಮಠ ಹಾಗೂ ಜೈನ್ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಕರೋನಾಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು, ಅದನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಿನಿಂದ ಜಾರಿಗೆ ತರಲು ಸೂಚಿಸಲಾಗಿದೆ. ಲಾಕ ಡೌನ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಹಾಗೂ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಿದ್ದು, ಲಾಠಿ ಉಪಯೋಗಿಸದೆ ಶಾಂತವಾಗಿ ಕಾರ್ಯನಿರ್ವಹಿಸಲು ಸೂಚಿಸಿದ್ದಾಗಿ ಹೇಳಿದರು.


Spread the love

About gcsteam

    Check Also

    ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರಿಂದ ನಾಳೆ ಐಐಟಿಯಲ್ಲಿನ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಉದ್ಘಾಟನೆ

    Spread the loveಧಾರವಾಡ ಫೆ.29: ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್‌ಕರ್ ಅವರು ನಾಳೆ ಮಾರ್ಚ್ 1, …

    Leave a Reply