Breaking News

ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಜ್ವರ

Spread the love

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆಯ ಕಾರ್ಯ ಕ್ರಮಗಳನ್ನು ರದ್ದುಪಡಿಸಿ ವಿಶ್ರಾಂತಿಗೆ ನಿರ್ಧರಿಸಿರುವ ಸಿದ್ದರಾಮಯ್ಯ, ಕೋವಿಡ್ ತಪಾಸಣೆಗೆ ಕೂಡ ಒಳಗಾಗಿದ್ದಾರೆ. ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.ಪೂರ್ವ ನಿಯೋಜಿತ ಕಾರ್ಯಕ್ರಮದಂತೆ ಇಂದು ಮಧ್ಯಾಹ್ನ ಕಾಡುಮಲ್ಲೇಶ್ವರ ದೇವಸ್ಥಾನ ಮುಂಭಾಗ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು.ಇದಾದ ಬಳಿಕ ಮಧ್ಯಾಹ್ನ 1 ಗಂಟೆಗೆ ಸುಬ್ರಹ್ಮಣ್ಯನಗರದ ಸಂಗೊಳ್ಳಿ ರಾಯಣ್ಣ ಉದ್ಯಾನವನ ಹಾಗೂ ಮಧ್ಯಾಹ್ನ 1-30 ಗಂಟೆಗೆ ಗಂಗೊಂಡನಹಳ್ಳಿ ಚಂದ್ರಲೇಔಟ್ ವೃತ್ತದಲ್ಲಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿರುವ ಈ ಕಾರ್ಯಕ್ರಮಗಳಿಗೆ ಸಿದ್ದರಾಮಯ್ಯ ಗೈರು ಹಾಜರಾಗುತ್ತಿದ್ದು, ನಾಳೆ ಸಹ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.


Spread the love

About gcsteam

    Check Also

    ಮಗು ಮಾತನಾಡಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯಾ

    Spread the loveಹುಬ್ಬಳ್ಳಿ: ನಗರದ ಗೋಕುಲ ರಸ್ತೆಯಲ್ಲಿನ ಏರ್ ಪೋರ್ಟ್ ನಲ್ಲಿ ಮಗುವೊಂದನ್ನ ಮಾತನಾಡಿಸಿ ಖುಷಿ ಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಾನವರು …

    Leave a Reply