ಹುಬ್ಬಳ್ಳಿ; ಲೋಕಸಭಾ ಸದಸ್ಯ
ಡಿ.ಕೆ. ಸುರೇಶರನ್ನ ಗುಂಡಿಕ್ಕಿ ಕೊಲ್ಲಬೇಕು ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿಚಾರ ಸರಿಯಲ್ಲ
ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನು ದಾಟಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ಗೋಡ್ಸೇ ಗಾಂಧಿಯನ್ನ ಹತ್ಯೆ ಮಾಡಿದ್ದಾರೆ ಎಂದು ಹೇಳುತ್ತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ
ಬಿಜೆಪಿಯವರು ಗಾಂಧಿ ಹಂತಕರು ಎಂದು ಹೇಳುವುದು ಸರಿಯಲ್ಲ
ಅದನ್ನೇ ಪದೇ ಪದೇ ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು .ಇನ್ನು
ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರ ಕುರಿತು ಸಹ ಪ್ರತಿಕ್ರಿಯೆ ಕೊಟ್ಟ ಅವರ
ಈ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ ಎಂದರು. ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೆ ಶೆಟ್ಟರ್ ಸಭೆ ವಿಚಾರಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ
ಪಕ್ಷದ ಸಂಘಟನೆ ಕುರಿತಂತೆ ಸಭೆಯಲ್ಲಿ ಚರ್ಚೆಗಳಾಗಿವೆ ಎಂದ ಅವರು ಧಾರವಾಡ ಲೋಕಸಭೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರು ಅನುಮತಿ ಕೊಟ್ಟರೇ ಸ್ಪರ್ಧಿಸುತ್ತೇನೆ ಎಂದರು, ಧಾರವಾಡ ಲೋಕಸಭೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರು ಸೂಚನೆ ನೀಡಿದರೇ ಸ್ಪರ್ಧಿಸುತ್ತೇನೆ. ಅಲ್ಲದೇ ಪಕ್ಷದ ನಾಯಕರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು
ವರಿಷ್ಠರು ಚರ್ಚೆ ಮಾಡಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಹಾಗೇನಾದರೂ ಸ್ಪರ್ಧೆ ಮಾಡಲು ಸೂಚನೆ ನೀಡಿದರೇ ಸ್ಪರ್ಧೆ ಮಾಡಲು ಸಿದ್ಧ ಎಂದು ಅವರು ಹೇಳಿದರು.
Tags #Political #nation #kannada #karnataka
[ajax_load_more]Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …