Breaking News

ಬಿಜೆಪಿ ಪರವಾಗಿ ಪೊಲೀಸ್ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ: ಏಗನಗೌಡರ ಆರೋಪ

Spread the love

ಧಾರವಾಡ; ಚುನಾವಣಾ ನೀತಿ ಸಂಹಿತೆ ಹೆಸರಲ್ಲಿ ಅಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದು, ಕೂಡಲೇ ಅಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ನಿಸ್ಪಕ್ಷಪಾತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಧಾರವಾಡ-71 ಕ್ಷೇತ್ರದ ಶಹರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮಾ.30 ರಂದು ರಾಮನವಮಿ ಅಂಗವಾಗಿ ಶೋಭಾಯಾತ್ರೆ ನಡೆಸಲು ಚುನಾವಣಾಧಿಕಾರಿಗಳ ಪರವಾನಿಗಿ ಪಡೆಯಲಾಗಿತ್ತು. ಶೋಭಾಯಾತ್ರೆ ಸಂದರ್ಭದಲ್ಲಿ ಪೊಲೀಸರು ನೀತಿ ಸಂಹಿತೆ ನೆಪದಲ್ಲಿ ಆ ಶೋಭಾಯಾತ್ರೆಯನ್ನು ತಡೆದು ಸ್ಥಗಿತಗೊಳಿಸಿದರು. ಆದರೆ, ಎ.2 ರಂದು ಬಿಜೆಪಿಯವರು ಆಯೋಜಿಸಿದ್ದ ಶೋಭಾಯಾತ್ರೆಯಲ್ಲಿ ಡಿಜೆ ಕೂಡ ಬಳಸಲಾಗಿತ್ತು. ಕೇಂದ್ರ ಸಚಿವರು, ಶಾಸಕರು ಅದರಲ್ಲಿ ಭಾಗವಹಿಸಿದ್ದರು. ಇದಕ್ಕೆ ಸ್ವತಃ ಎಸಿಪಿ ಅವರ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ನಮಗೆ ಅನ್ವಯ ಆಗುವ ನೀತಿ ಸಂಹಿತೆ ಬಿಜೆಪಿಯವರಿಗೆ ಏಕೆ ಅನ್ವಯ ಆಗುವುದಿಲ್ಲ ಎಂದು ಅವರು ಪ್ರಶ್ನಿಸಿದರು.

ಇನ್ನೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿ ಪೊಲೀಸರು ಬಿಜೆಪಿಯವರಿಗೆ ಅನುಕೂಲ ಮಾಡಿಕೊಡುತ್ತ ನಮಗೆ ತೊಂದರೆ ಕೊಡುತ್ತಿದ್ದಾರೆ. ಚುನಾವಣಾಧಿಕಾರಿ, ಶಹರ ಎಸಿಪಿ ಮತ್ತು ಉಪನಗರ ಠಾಣೆ ಸಿಪಿಐ ಪಕ್ಷಪಾತ ಮಾಡುವ ಮೂಲಕ ಬಿಜೆಪಿ ಪರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರನ್ನು ಹೆದರಿಸಿ ನಿಯಂತ್ರಿಸುವ ಕೆಲಸ ನಡೆಯುತ್ತಿದೆ. ಈ ಅಧಿಕಾರಿಗಳ ವರ್ತನೆ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗುವುದು ಎಂದು ಅರವಿಂದ ಏಗನಗೌಡರ ತಿಳಿಸಿದರು.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!