Breaking News

ಕರುನಾಡಿನ ನಟಿಮಣಿಯರನ್ನ ಹುಡುಕುವ ಮಹಾನಟಿ ಕಾರ್ಯಕ್ರಮ

Spread the love

ಕರುನಾಡಿನ ನಟಿಮಣಿಯರನ್ನ ಹುಡುಕುವ ಮಹಾನಟಿ ಕಾರ್ಯಕ್ರಮ

ಹುಬ್ಬಳ್ಳಿ;
ನಟಿಯಾಗುವ ಕನಸಿಗೆ ನೀರೆರೆಯಲಿದೆ ಮಹಾನಟಿ ಕಾರ್ಯಕ್ರಮ, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಜೀ ಕನ್ನಡ ವಾಹಿನಿ, ಈ ಬಾರಿ ಮತ್ತೊಂದು ಹೊಸ ರಿಯಾಲಿಟಿ ಶೋ ಮೂಲಕ ಕರುನಾಡಿನ ಯುವ ನಾಯಕನಟಿಯರನ್ನ ಹುಡುಕುವ ಕೆಲಸ ಶುರುಮಾಡಿದೆ.
ಜೀ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್‌,ಕಾಮಿಡಿ ಕಿಲಾಡಿಗಳು,ಡಿಕೆಡಿ ಮತ್ತು ಸರಿಗಮಪ ಮೂಲಕ ಈಗಾಗಲೆ ಸಾಕಷ್ಟು ನಟನಟಿಯರು ,ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ ಕನ್ನಡ ವಾಹಿನಿ ಇದೀಗ ಮಹಾನಟಿ ಎಂಬ ಹೊಚ್ಚ ಹೊಸ ರಿಯಾಲಿಟಿ ಶೋ ಮೂಲಕ ನಿಮ್ಮೂರಿನಲ್ಲಿರುವ ನಟಿಯಾಗುವ ಕನಸು ಹೊತ್ತಿರುವ, ಅವಕಾಶ ವಂಚಿತ ಪ್ರತಿಭೆಗಳಿಗೆ ವೇದಿಕೆ ಒದಗಿಸಲು ಈ ಕಾರ್ಯಕ್ರಮವನ್ನ ಹೆಣೆದ್ದಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಯುವ ನಾಯಕ ನಟಿಯರನ್ನ ನೀಡುವ ಕೆಲಸವನ್ನ ಈ ರಿಯಾಲಿಟಿ ಶೋ ಮಾಡಲಿದೆ.
ಕರುನಾಡಿನ ಧೀಮಂತ ನಾಯಕ ನಟಿಯರ ಸಾಲಿಗೆ ಸೇರಲು ಬಯಸುವ ಎಲ್ಲಾ ಯುವ ನಾಯಕ ನಟಿಯರಿಗೆ ವೇದಿಕೆ ಕಲ್ಪಿಸಿಕೊಡುವ ಈ ಮಹಾನಟಿ ಕಾರ್ಯಕ್ರಮವು ,ನಿಮ್ಮ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಿಮ್ಮೂರಿಗೆ ಬಂದು, ನಿಮ್ಮ ಪ್ರತಿಭಯೆನ್ನ ಗುರುತಿಸಿ, ನಿಮ್ಮನ್ನ ಈ ವೇದಿಕೆ ಕರೆತರುವ ಕೆಲಸವನ್ನ ಈ ಮೂಲಕ ಮಾಡಲಿದೆ.
ಮಹಾನಟಿ ಎಂಬ ಈ ರಿಯಾಲಿಟಿ ಶೋಗಾಗಿ ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಆಡಿಷನ್‌ ಪ್ರಕ್ರಿಯೆ ನಡೆಸಲ್ಲಿದ್ದು ,ಇದರ ಆರಂಭಿಕ ಹಂತವೆಂಬಂತೆ ಇದೇ 11-02-2024 ಭಾನುವಾರ ಬೆಳಿಗ್ಗೆ 9 ಗಂಟೆಗೆ ಎನ್,ಇ ಸೊಸೈಟಿಯ
ಗರ್ಲ್ಸ್ ಇಂಗ್ಲೀಷ್ ಹೈಸ್ಕೂಲ್, ಶ್ರೀ ಕೃಷ್ಣ ಕಲ್ಯಾಣ ಮಂಟಪ ಹತ್ತಿರ,ದೇಶಪಾಂಡೆ ನಗರ ಹುಬ್ಬಳ್ಳಿಯಲ್ಲಿ ಆಡಿಷನ್ಸ್‌ ನಡೆಯಲ್ಲಿದ್ದು.ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು 2 ಪಾಸ್‌ ಪೋರ್ಟ್‌ ಸೈಜ್‌ ಪೋಟೋ ಜೊತೆ ಅಡ್ರಸ್‌ ಪ್ರೂಫ್‌ ಜೆರಾಕ್ಸ್‌ ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದ್ದು, ಜೀ ಕನ್ನಡ ನಡೆಸುವ ಈ ಆಡಿಷನ್‌ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ತಿಳಿಸಿದೆ.


Spread the love

About Karnataka Junction

[ajax_load_more]

Check Also

ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ

Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …

Leave a Reply

error: Content is protected !!