ಹುಬ್ಬಳ್ಳಿ : ಬರೋಬ್ಬರಿ 40 ವರ್ಷಗಳಿಗೂ ಅಧಿಕ ಕಾಲ ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಕೊಡದೆ ಮೋಸ ಮಾಡಲಾಗಿದೆ. ತಮ್ಮ ಪತಿಗೆ ಬಿಜೆಪಿ ವಿಶ್ವಾಸದ್ರೋಹ ಮಾಡಿದೆ ಎಂದು ಜಗದೀಶ್ ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್ ಹುಬ್ಬಳ್ಳಿಯ ಮನೆಯಲ್ಲಿ ಕಣ್ಣೀರು ಹಾಕಿದ್ದಾರೆ.
ಕಳೆದೊಂದು ವಾರದಿಂದ ಬಿಜೆಪಿ ಟಿಕೆಟ್‌ಗಾಗಿ ದೆಹಲಿ, ಬೆಂಗಳೂರು ಎಲ್ಲೆಡೆ ಸುತ್ತಾಡಿದರೂ ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡಲಿಲ್ಲ. ಇನ್ನು ನಿನ್ನೆ ಬೆಂಗಳೂರಿಗೆ ಹೋಗಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಆದರೆ, 40 ವರ್ಷಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ತಮ್ಮ ಪತಿಗೆ ಟಿಕೆಟ್ ಕೊಡಲಿಲ್ಲ. ಬಿಜೆಪಿ ತಮ್ಮ ಪತಿಗೆ ವಿಶ್ವಾಸ ದ್ರೋಹವನ್ನು ಮಾಡಿದೆ ಎಂದು ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿಯ ತಮ್ಮ ನಿವಾಸಕ್ಕೆ ಬಂದ ಕೂಡಲೇ ಗಂಡನ್ನು ನೋಡಿ ಶಿಲ್ಪಾ ಶೆಟ್ಟರ್ ಕಣ್ಣೀರು ಹಾಕಿದರು.