Breaking News

ನಾಳೆ ತವನಪ್ಪ ಅಷ್ಟಗಿ ನಾಮಪತ್ರ ವಾಪಸ್: ವಿನಯ್ ಕುಲಕರ್ಣಿಗೆ ಬೆಂಬಲ

Spread the love

ಧಾರವಾಡ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತವನಪ್ಪ ಅಷ್ಟಗಿ ನಾಳೆ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಬೆಂಬಲ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ನಮಗೆ ಸಾಮಾಜಿಕ ನ್ಯಾಯ ಸಿಗಲಿಲ್ಲ. ನಮ್ಮ ಗೌರವಕ್ಕೆ ಧಕ್ಕೆ ಬರುವ ಕೆಲಸವನ್ನು ಈಗಿನ ಶಾಸಕರಾದ ಅಮೃತ ದೇಸಾಯಿ ಅವರು ಮಾಡಿದರು. ಆರು ಬಾರಿ ಸೋತವರನ್ನು ನಾವು ಶಾಸಕರನ್ನಾಗಿ ಮಾಡಿದ್ದೆವು. ತನು, ಮನ, ಧನದಿಂದ ಕಾರ್ಯಕರ್ತರೆಲ್ಲ ಸೇರಿ ಅವರನ್ನು ಆಯ್ಕೆ ಮಾಡಿದ್ದೆವು. ಆದರೆ, ಅಮೃತ ದೇಸಾಯಿ ಅವರು ಕಾರ್ಯಕರ್ತರನ್ನೂ ಕಡೆಗಣಿಸಿದರು ಎಂದರು.

ಸತೀಶ ಜಾರಕಿಹೊಳಿ ಅವರು ಇಂದು ನಮ್ಮ ಮನೆಗೆ ಬಂದು ಮನವೊಲಿಸಿ ನಮಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರು ಹೇಳಿದ್ದರಿಂದ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ನಾಳೆ ನಾಮಪತ್ರ ವಾಪಸ್ ಪಡೆಯುತ್ತೇನೆ. ಬಿಜೆಪಿಯಲ್ಲಿ ಒಂದು ವಿಶ್ವಾಸ ಮೇಲೆ ಇದ್ದೆ. ಆದರೆ, ಅಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ. ಸಾಮಾಜಿಕ ನ್ಯಾಯದ ವಿಶ್ವಾಸದಿಂದ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಷರತ್ತು ವಿಧಿಸಿಲ್ಲ. ಗೌರವ ಬಯಸಿ ಬಂದಿದ್ದೇನೆ. ಮೊದಲು ನಾನು ಕಾಂಗ್ರೆಸ್‌ನಲ್ಲೇ ಇದ್ದೆ. ಆ ಬಳಿಕ ಕೆಜೆಪಿ, ಬಿಜೆಪಿ ಸೇರ್ಪಡೆಗೊಂಡಿದ್ದೆ. ಈಗ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ ಎಂದರು.


Spread the love

About Karnataka Junction

[ajax_load_more]

Check Also

ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್‌

Spread the loveಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು …

Leave a Reply

error: Content is protected !!