Breaking News

ಕ್ಷೇತ್ರದ ಅಭಿವೃದ್ಧಿಯೇ ಶ್ರೀರಕ್ಷೆ : ಜಗದೀಶ್ ಶೆಟ್ಟರ್

Spread the love

ಹುಬ್ಬಳ್ಳಿ: ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ನನಗೆ, ಅಲ್ಲಿನ ಉಸಿರುಗಟ್ಟುವ ವಾತಾವರಣ ಜೊತೆಗೆ ನನಗೆ ನಡೆಸಿಕೊಂಡ ರೀತಿಯಿಂದ ಮನನೊಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದೇವೆ. ಹಿಂದಿನಂತೆ ಈ ಬಾರಿಯೂ ತಮ್ಮೆಲ್ಲರ ಬೆಂಬಲ ಸಹಕಾರ ಇರಬೇಕು. ಈ ಬಾರಿ ಹಿಂದಿಗಿಂತಲೂ ಅತಿಹೆಚ್ಚು ಆರ್ಶೀವದಿಸಿ ಏರಳೇ ಬಾರಿ ವಿಧಾನಸೌಧಕ್ಕೆ ಕಳಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸೆಂಟ್ರಲ್ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.

ಅವರು ಹುಬ್ಬಳ್ಳಿಯ ಖಾಸಗಿ ಹೊಟೆಲ್’ನಲ್ಲಿ ಪ್ರಜ್ಞಾವಂತರ ಪ್ರಚಾರದ ಸಭೆ ನಡೆಸಿ ಮಾತನಾಡಿದ ಅವರು ಮಾತನಾಡಿದರು.

ಕಳೆದ 30 ವರ್ಷಗಳಿಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ತಳಮಟ್ಟದಿಂದ ಬಿಜೆಪಿ ಪಕ್ಷವನ್ನು ಬೆಳೆಸಿದ್ದೇ‌ನೆ. ಇದಕ್ಕೆ ಪಕ್ಷ ಅನೇಕ ಗೌರವ ಸ್ಥಾನಮಾನ ನೀಡಿದೆ. ಆದರೆ ಇತ್ತಿಚೆಗೆ ಪಕ್ಷದಲ್ಲಿನ ಕೆಲವು ಬೆಳವಣಿಗೆ, ವ್ಯಕ್ತಿ ಪೂಜೆಯಿಂದ ಬೇಸತ್ತು ಹೋಗಿದ್ದೇನೆ. ಸದ್ಯ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣದಿಂದ ಹೊರಬಂದಿದ್ದು, ಈ ವೇಳೆ ಯಾವುದೇ ಅಧಿಕಾರದ ಆಸೆ ಬಿಟ್ಟು, ಸ್ವಾಭಿಮಾನದ ಪ್ರಶ್ನೆಯಿಂದ ಏಳನೇ ಬಾರಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಬಿ ಫಾರಂ ಪಡೆದು ಸ್ಪರ್ಧೆ ಮಾಡಿದ್ದು, ಈ ವೇಳೆ ಪ್ರಜ್ಞಾವಂತರು ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ್ತೊಮ್ಮೆ ಗೆಲ್ಲಿಸಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಇನ್ನು ಈಗಾಗಲೇ ಓರ್ವ ಶಾಸಕನಾಗಿ, ಸಚಿವನಾಗಿ, ಮುಖ್ಯಮಂತ್ರಿ ಆಗಿ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ, ಧಾರವಾಡ ಜಿಲ್ಲೆ, ರಾಜ್ಯಕ್ಕೆ ನನ್ನದೇ ಆದ ಕೊಡುಗೆ ನೀಡಿದ್ದೇನೆ. ಆದರೆ ಇನ್ನು ಅಭಿವೃದ್ಧಿ ಕಾರ್ಯಗಳು ಮಾಡಬೇಕಿದೆ. ಈ ದಿಸೆಯಲ್ಲಿ ಉಳಿದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಜನರ ಆರ್ಶೀವಾದ ಬೇಕಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಇದಕ್ಕೆ ಸಭೆಯಲ್ಲಿ ಪ್ರಜ್ಞಾವಂತರು ಜಗದೀಶ್ ಶೆಟ್ಟರ್ ಅವರು ತೆಗೆದುಕೊಂಡ ನಿರ್ಧಾರವನ್ನು ಬೆಂಬಲಿಸಿ, ಅವರಿಗೆ ಪ್ರಚಂಡ ಬಹುಮತದಿಂದ ಆರಿಸಿ ತರುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮೋಹನ್ ಲಿಂಬಿಕಾಯಿ, ನೀಲಕಂಠ ಅಸೂಟಿ, ಸದಾನಂದ ಡಂಗನವರ, ಈರಪ್ಪ ಎಮ್ಮಿ ಸೇರಿದಂತೆ ಅನೇಕ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.


Spread the love

About Karnataka Junction

[ajax_load_more]

Check Also

ರಾಜ್ಯ ಬಜೆಟ್ ಮಂಡನೆಗೆ ಸಲಹೆ ಗಳು

Spread the love ಹುಬ್ಬಳ್ಳಿ: ಈ ರಾಜ್ಯದ ಮುಖ್ಯ ಮಂತ್ರಿ ಯಾಗಿ ಹಣಕಾಸು ಸಚಿವ ರಾಗಿ ಈ ಬಾರಿ 16 …

Leave a Reply

error: Content is protected !!