Breaking News

ಉಪ್ಪಿನ ಬೆಟಗೇರಿಯಲ್ಲಿ ಮನೆ, ಮನೆ ಪ್ರಚಾರ ನಡೆಸಿದ ಶಿವಲೀಲಾ ಕುಲಕರ್ಣಿ

Spread the love

ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಶಿವಲೀಲಾ ಕುಲಕರ್ಣಿ ಅವರು ಪಾದಯಾತ್ರೆ ಮಾಡುವ ಮೂಲಕ ಮನೆ, ಮನೆ ಪ್ರಚಾರ ನಡೆಸಿದರು.

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನುವಾಣಾ ಕಣಕ್ಕಿಳಿದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪರವಾಗಿ ಅವರ ಪತ್ನಿ ಶಿವಲೀಲಾ ಅವರೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಉಪ್ಪಿನ ಬೆಟಗೇರಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿದ ಶಿವಲೀಲಾ ಅವರು, ವಿನಯ್ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗಳ ಕರಪತ್ರವನ್ನು ಮತದಾರರಿಗೆ ನೀಡಿ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಶಿವಲೀಲಾ ಕುಲಕರ್ಣಿ ಅವರಿಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಯಿತು.

ತವನಪ್ಪ ಅಷ್ಟಗಿ ಕೂಡ ಶಿವಲೀಲಾ ಕುಲಕರ್ಣಿ ಅವರಿಗೆ ಸಾಥ್ ನೀಡಿದರು. ಈಶ್ವರ ಶಿವಳ್ಳಿ, ಬಾಬಾಮೊಯುದ್ದೀನ್ ಚೌಧರಿ ಸೇರಿದಂತೆ ಅನೇಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.


Spread the love

About Karnataka Junction

[ajax_load_more]

Check Also

ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ

Spread the love  ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …

Leave a Reply

error: Content is protected !!