ಶಿರಸಿ: ಶಾಸಕರ ಅನುದಾನದಲ್ಲಿ ಕೊರೊನಾ ಸೋಂಕಿತ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ನೀಡಿರುವ ಹೊಸ ಆಂಬ್ಯುಲೆನ್ಸ್ಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಚಾಲನೆ ನೀಡಿದರು.
ವಿಧಾನಸಭಾ ಸ್ವಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಆಂಬ್ಯುಲೆನ್ಸ್ ವಾಹನಗಳನ್ನು ಖರೀದಿಸಲಾಗಿದೆ. ಹೊಸದಾಗಿ ಬಂದ ಆಂಬ್ಯುಲೆನ್ಸ್ ಏರಿ ಕುಳಿತ ಸಚಿವರು ತಾವೇ ವಾಹನ ಚಲಾಯಿಸಿದರು. ಈ ಮೂಲಕ ಯಲ್ಲಾಪುರದ ಪ್ರವಾಸಿ ಮಂದಿರದಿಂದ ಆರಂಭಿಸಿ ಯಲ್ಲಾಪುರ ನಗರಕ್ಕೆ ಒಂದು ಸುತ್ತುಹಾಕಿದರು. ಇದೇ ವೇಳೆ ಪಕ್ಕದ ಸೀಟಿನಲ್ಲಿ ಕುಳಿತು ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಬಳಿ, ‘ಕೇಸ್ ಆಗಲ್ಲ, ನನ್ನ ಹತ್ತಿರ ಲೈಸನ್ಸ್ ಇದೆ’ ಎಂದು ನಗೆಚಟಾಕಿ ಹಾರಿಸಿದರು.ಆಂಬುಲೆನ್ಸ್ ಚಲಾಯಿಸಿದ ಸಚಿವ ಹೆಬ್ಬಾರ್ ಅವರಿಗೆ ಈ ಹಿಂದೆ ಲಾರಿ ಚಾಲಕರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ. ನಂತರ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೆಲವು ರಾಜಕೀಯ ಕಾರಣಕ್ಕೆ ಕಾಂಗ್ರೆಸ್ಗೆ ಬರುವ ಮೂಲಕ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಅದರ ನಂತರ ಪುನಃ ಬಿಜೆಪಿ ಸೇರ್ಪಡೆಯಾಗಿ ಇದೀಗ ರಾಜ್ಯ ಕಾರ್ಮಿಕ ಸಚಿವರಾಗಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …