ಹುಬ್ಬಳ್ಳಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಪಟ್ಟಣದಲ್ಲಿ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಎಂ.ಆರ್. ಪಾಟೀಲ ಪರವಾಗಿ ಮತ ಯಾಚಿಸಿದರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲು ಪಟ್ಟಣದಲ್ಲಿ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಎಂ.ಆರ್. ಪಾಟೀಲ ಪರವಾಗಿ ಮತ ಮತ ನೀಡುವಙತೆ ಕೇಳಿಕೊಂಡರು.
ತೆರೆದ ವಾಹನದಲ್ಲಿ ಬೊಮ್ಮಾಯಿ ಅವರು, ಕಾರ್ಯಕರ್ತರತ್ತ ಕೈ ಬೀಸುತ್ತಾ ಸಾಗಿದರು.
ಬಿಜೆಪಿಗೆ, ಬಸವರಾಜ ಬೊಮ್ಮಾಯಿ ಪರ ಘೋಷಣೆಗಳು ಮೊಳಗಿದವು. ಕಾರ್ಯಕರ್ತರು ಪಾಟೀಲ್, ಪಾಟೀಲ್ ಎಂ.ಆರ್. ಪಾಟೀಲ್ ಎಂದು ಕೂಗುತ್ತಾ ಅಭಿಮಾನ ಮೆರೆದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪರ ಆಡಳಿತ ಬೆಂಬಲಿಸಲು ಮನವಿ ಮಾಡಿದರು.
ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರೋಡ್ ಶೋಗೆ ಸಾಥ್ ನೀಡಿದವು. ಡೊಳ್ಳಿನ ಬಡಿತಕ್ಕೆ ಕಾರ್ಯಕರ್ತರು ಹೆಜ್ಜೆ ಹಾಕಿದರು. ಬಸ್ ನಿಲ್ದಾಣದಿಂದ ಆರಂಭಗೊಂಡ ರೋಡ್ ಶೋ ಬ್ರಹ್ಮ ಲಿಂಗೇಶ್ವರ ದೇವಸ್ಥಾನದ ವೃತ್ತದಲ್ಲಿ ಅಂತ್ಯಗೊಂಡಿತು.
ಸಂಸದ ಶಿವಕುಮಾರ ಉದಾಸಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಬಸವರಾಜ ಕುಂದಗೋಳಮಠ ಹಾಗೂ ಸ್ಥಳೀಯ ಮುಖಂಡರು ಇದ್ದರು.