ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಸಿ.ಎಂ ಉದಾಸಿ ಸ್ಥಿತಿ ಗಂಭೀರವಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಾಲ್ಕು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಸಿಲುಕಿದ್ದ ಸಿ.ಎಂ ಉದಾಸಿ ಅವರನ್ನು ಹೊಸೂರು ರಸ್ತೆಯಲ್ಲಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಕಿರಣ್ ಮಜುಂದಾರ್ ಷಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಸಿ.ಎಂ ಉದಾಸಿ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಿ.ಎಂ ಉದಾಸಿ ಆರೋಗ್ಯ ವಿಚಾರಿಸಿದ್ದರು.ಈ ವೇಳೆ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನುವ ಮಾಹಿತಿಯನ್ನು ವೈದ್ಯರು ಸಿಎಂ ಯಡಿಯೂರಪ್ಪ ಗಮನಕ್ಕೆ ತಂದಿದ್ದರು. ಆದರೂ ಎಲ್ಲ ರೀತಿಯ ಚಿಕಿತ್ಸೆ ನೀಡುವಂತೆ ಸಿಎಂ ಸೂಚಿಸಿದ್ದು, ಅದರಂತೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
Check Also
ಜಿಲ್ಲಾ ಉಸ್ತುವಾರಿ ಕ್ಷೇತ್ರದಲ್ಲಿಯೇ ಕೈ ಅಭ್ಯರ್ಥಿ ವಿನೋದ ಅಸೂಟಿಗೆ ಹಿನ್ನಡೆ
Spread the loveಗೆಲುವು ಸಾಧಿಸುತಿದ್ದಂತೆ ದೆಹಲಿಗೆ ತೆರಳಿದ ಪ್ರಲ್ಹಾದ್ ಜೋಶಿ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ನೂತನ ಸಂಸದರು …