ಡಿಕೆಶಿ ಕಾರ್ಯಕ್ರಮದಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ: ₹10 ಸಾವಿರ ದಂಡ

Spread the love

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 30ರಂದು ನಗರಕ್ಕೆ ಭೇಟಿ ನೀಡಿದ್ದಾಗ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿ, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ₹10 ಸಾವಿರ ದಂಡ ವಿಧಿಸಿದ್ದಾರೆ. ಒಂದೇ ಕಾರ್ಯಕ್ರಮದಲ್ಲಿ ನಡೆದ ಉಲ್ಲಂಘನೆಗೆ ಒಮ್ಮೆ ₹2 ಸಾವಿರ, ಮತ್ತೊಮ್ಮೆ ₹8 ಸಾವಿರ ದಂಡ ವಿಧಿಸಿರುವುದಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಹೆಚ್ಚಿನ ಕಾರ್ಯಕರ್ತರು ಅಂತರ ಕಾಯ್ದುಕೊಳ್ಳದೆ ಜಮಾಯಿಸಿದ್ದರು. ₹2 ಸಾವಿರ ದಂಡ ವಿಧಿಸಲಾಗಿತ್ತು. ಅವರಿಗೆ ಸ್ವಾಗತ ಕೋರಲು ರಸ್ತೆಯಲ್ಲಿ ನಿಯಮಬಾಹಿರವಾಗಿ ಬ್ಯಾನರ್‌ ಹಾಗೂ ಬಂಟಿಂಗ್ಸ್‌ಗಳನ್ನು ಹಾಕಿದ್ದಕ್ಕಾಗಿ ₹8 ಸಾವಿರ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.
ಬಿಜೆಪಿ ಆಣತಿಯಂತೆ ದಂಡ: ‘ಪಾಲಿಕೆ ಅಧಿಕಾರಿಗಳು ಬಿಜೆಪಿ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಮೊದಲು ₹2 ಸಾವಿರ ದಂಡ ಹಾಕಿ, ನಂತರ ಮತ್ತೆ ₹8 ಸಾವಿರ ದಂಡ ವಿಧಿಸಿದ್ದಾರೆ. ಇದು ಅಧಿಕಾರಿಗಳ ಇಬ್ಬಗೆಯ ನೀತಿಗೆ ಸಾಕ್ಷಿಯಾಗಿದೆ. ನಗರದಲ್ಲಿ ಸಚಿವರು ನಡೆಸುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿರುತ್ತದೆ. ಆಗ, ಅಧಿಕಾರಿಗಳು ಎಲ್ಲಿ ಹೋಗಿರುತ್ತಾರೆ’ ಎಂದು ದಂಡ ಪಾವತಿಸಿರುವ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಪ್ರಶ್ನಿಸಿದರು.


Spread the love

Leave a Reply

error: Content is protected !!