Breaking News

ಬ್ಯಾಂಕ್ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ

Spread the love

ಧಾರವಾಡ :ರಾಜ್ಯ ಸರಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ,ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. ಆದಾಗ್ಯೂ ಕುಂದಗೋಳ, ನವಲಗುಂದ ಸೇರಿ ಕೆವು ಕಡೆ ಬ್ಯಾಂಕಗಳು ಪರಿಹಾರಹಣವನ್ನು ರೈತರ ಸಾಲಕ್ಕೆ ಹೊಂದಿಸುತ್ತಿರುವ ಕುರಿತು ದೂರು, ವರದಿಗಳು ಬರುತ್ತಿವೆ. ಈ ವಿಷಯದಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಬ್ಯಾಂಕರ್ಸ ಪ್ರಗತಿ ಪರಿಶೀಲನಾ ಸಮಿತಿಯ ಸಹ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2024 ರ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರಕಾರ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪಡೀತ ತಾಲೂಕುಗಳೆಂದು ಘೋಷಣೆ ಮಾಡಿ, ಸರಕಾರದ ನಿಯಮಾವಳಿಗಳ ಪರಿಹಾರ ಹಣ, ಇತರ ಸೌಲಭ್ಯಗಳನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಈಗ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿರುವದರಿಂದ ರೈತರು ಭೂಮಿ ಉಳುಮೆ ಮಾಡಿ ಬಿತ್ತನೆಗೆ ಸಿದ್ದಗೊಳಿಸಬೇಕು, ಬೀಜ,ಗೊಬ್ಬರ ಖರೀದಿಸಬೇಕು. ಅವರ ನೆರವಿಗಾಗಿ ರಾಜ್ಯ ಸರಕಾರವು ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ನೇರವಾಗಿ ಬರಪರಿಹಾರ ಜಮೆ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರೈತರಿಗೆ ಸರಕಾರಗಳಿಂದ ನೀಡುವ ಸಹಾಯಧನ, ಸಬ್ಸಿಡಿ, ಬರಪರಿಹಾರ ಮುಂತಾದವುಗಳನ್ನು ರೈತರ ಬ್ಯಾಂಕ್ ಸಾಲದ ಖಾತೆಗೆ ಹೊಂದಾಣಿಕೆ ಮಾಡದಂತೆ ರಾಜ್ಯ ಸರಕಾರ ಮತ್ತು ರಾಜ್ಯಮಟ್ಟದ ಬ್ಯಾಂಕರ್ಸ್ ಕಮೀಟಿ ಸೂಚಿಸಿವೆ. ಈ ಕುರಿತು ಪತ್ರ ಸಹ ಹೊರಡಿಸಿವೆ. ಅದರಂತೆ ಧಾರವಾಡ ಜಿಲ್ಲಾಢಳಿತವು ಕಳೆದ ವರ್ಷ ಮತ್ತು ಈ ವರ್ಷದಲ್ಲಿ ಎರಡಮೂರು ಸಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಜಿಲ್ಲೆಯ ಪ್ರತಿ ಭ್ಯಾಂಕ್ ಮುಖ್ಯಸ್ಥರಿಗೆ, ವ್ಯವಸ್ಥಾಪಕರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ರೈತರ ಸಹಮತ ಪಡೆಯದೇ ಅವರ ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರನ್ನು ಮತ್ತು ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಜವಾಬ್ದರರನ್ನಾಗಿಸಿ,‌ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾಗುತ್ತದೆ. ಬ್ಯಾಕ್ ಗಳು ರೈತರಿಗೆ ಸಹಾಕರ ನೀಡಬೇಕು. ಬರಗಾಲದಿಂದ ನೊಂದಿರುವ ರೈತರಿಗೆ ಪ್ರಸಕ್ತ ಮುಂಗಾರು ಉತ್ತಮ ಫಸಲಿನ ಭರವಸೆ ಮೂಡಿಸಿದ್ದು, ರೈತ, ಕೃಷಿ ಅಭಿವೃದ್ಧಯಲ್ಲಿ ಬ್ಯಾಂಕ್ ಗಳು ಕೈ ಜೋಡಿಸಬೇಕು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಎಲ್ಲ ಬ್ಯಾಂಕಗಳ ಮುಖ್ಯಸ್ಥರು ಮತ್ತು ಎಲ್ಲ ಬ್ಯಾಂಕ್ ಗಳ ಶಾಖಾ ವ್ಯವಸ್ಥಾಪಕರು ಗಮನಹರಿಸಿ, ರೈತರಿಗೆ ತೊಂದರೆ ಆಗದಂತೆ ಮತ್ತು ಬರಪರಿಹಾರ ಮೊತ್ತ ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ತೆಗೆದುಕೊಳ್ಳದೆ ರೈತರ ಕೈಗೆ ನೇರವಾಗಿ ಬರ ಪರಿಹಾರ ಹಣ ಸೀಗುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Karnataka Junction

    Check Also

    ತಾವು ಬೇಸಿಗೆಯ ರಜೆಗಾಗಿ ವಿಶೇಷ ರೈಲುಗಳ ಸಂಚಾರ ಮಾಹಿತಿ ಇಲ್ಲಿದೆ

    Spread the loveಹುಬ್ಬಳ್ಳಿ: ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ …

    Leave a Reply

    error: Content is protected !!