Breaking News

ಮಹದಾಯಿ ಯೋಜನೆ ಜಾರಿಗೆ ಬಿಜೆಪಿ ಸಿದ್ಧ-‌ಪ್ರಲ್ಹಾದ್ ಜೋಶಿ

Spread the love

ಹುಬ್ಬಳ್ಳಿ : ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಭಾರತೀಯ ಜನತಾ ಪಕ್ಷ ಯಾವಾಗಲೂ ಸಿದ್ಧವಿದ್ದು
ಈ ಯೋಜನೆ ಜಾರಿಗೊಳಿಸುವ ಜವಾಬ್ದಾರಿ ನನ್ನದು ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಹೇಳಿದರು.
ಧಾರವಾಡ ಜಿಲ್ಲೆಯ
ನವಲಗುಂದ ವಿಧಾನಸಭೆ ಕ್ಷೇತ್ರದ ಮೊರಬ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್‌ ಕುತಂತ್ರದಿಂದಾಗಿ ಮಹದಾಯಿ ನೀರು ಕರ್ನಾಟಕಕ್ಕೆ ದೊರೆಯುವುದು ವಿಳಂಬವಾಗುತ್ತಿದೆ. ಗೋವಾದಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಅವರು, ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದಿದ್ದನ್ನು ರಾಜ್ಯದ ಜನರು ಮರೆಯುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹಿಂದುಳಿದವರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ಕೊಡುವ ಹುನ್ನಾರ ನಡೆಸುತ್ತಿದೆ. ಮುಸ್ಲಿಮ್ ತುಷ್ಠಿಕರಣಕ್ಕೆ ಅತಿಯಾದ ಮಹತ್ವ ಕೊಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಾಮಾನ್ಯ ವ್ಯಕ್ತಿಯನ್ನು ಸಂಸದನನ್ನಾಗಿ ಚುನಾಯಿಸಿ, ಮಂತ್ರಿಯನ್ನಾಗಿ ಮಾಡಿದ್ದು ಧಾರವಾಡ ಕ್ಷೇತ್ರದ ಮತದಾರರು. ಇಲ್ಲಿನ ಮತದಾರರ ಋಣವನ್ನು ಎಂದಿಗೂ ಮರೆಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರತಿ ಬಾರಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ನನ್ನ ಮತದಾರರನ್ನು ಸ್ಮರಿಸಿಕೊಳ್ಳುತ್ತೇನೆ ಎಂದರು.
ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಧಾರವಾಡ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಹಾಗೂ ಇತರರು ಇದ್ದರು.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!