ತುಮಕೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ, ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ಪಿನ್ ಆಗಿದ್ದ ಶಿವಕುಮಾರ್ ಕೊರೊನಾ ಸೋಂಕಿನಿಂದ ಮಂಗಳವಾರ ಮೃತಪಟ್ಟಿದ್ದಾರೆ.
ಗುಬ್ಬಿ ತಾಲೂಕಿನ ಬಿದರೆಕಾಗ್ಗೆರೆ ಮೂಲದ ಶಿವಕುಮಾರ್, ತೀವ್ರ ಉಸಿರಾಟದ ಸಮಸ್ಯೆಯಿಂದ ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಶಿವಕುಮಾರ್ ವಿಚಾರಣೆ ಎದುರಿಸುತ್ತಿದ್ದರು. ಕೆಲ ದಿನಗಳ ಹಿಂದೆ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
