ಬೆಂಗಳೂರು; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಭಾರಿ ಗಾಳಿಯ ಪರಿಣಾಮವಾಗಿ ವಾಯುಭಾರ ಕುಸಿತವಾಗಿದ್ದುಬಬಿಹಾರ, ಜಾರ್ಖಂಡ್, ಕೇರಳದಲ್ಲಿ ಮಳೆಯಾಗಿದೆ. ಅಲ್ಲದೇ ಇನ್ನೂ ಮೂರು ದಿನ ಚದುರಿದ, ಭಾರೀ ಮಳೆಯ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಭಾರಿ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಬಿಹಾರ, ಅರುಣಾಚಲ ಪ್ರದೇಶ, ಅಸ್ಸೋಂ , ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಕರಾವಳಿ ಆಂಧ್ರ ಪ್ರದೇಶದಲ್ಲಿ 40 ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ. ಮುಂದಿನ 2 ದಿನಗಳಲ್ಲಿ ಗುಡುಗು, ಮಿಂಚು, ಗಾಳಿ ಸಮೇತ ಇನ್ನಷ್ಟು ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.ರಾಜ್ಯದಲ್ಲಿ 4 ದಿನ ಯೆಲ್ಲೋ ಅಲರ್ಟ್: ಇನ್ನು ರಾಜ್ಯದ ಹಲವೆಡೆಯೂ ಭಾರೀ ಮಳೆಯಾಗಿದೆ. ಮುಂದಿನ 4 ದಿನ ಕೂಡ ಇದೇ ರೀತಿ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 6ರವರೆಗೆ ರಾಜ್ಯಾದ್ಯಂತ ಗುಡುಗು ಮಳೆ ಸುರಿಯುವ ಸಾಧ್ಯತೆ ಇದೆ.
![](https://karnatakajunction.com/wp-content/uploads/2022/09/IMG_20220503_204644.jpg)