ಕಸಾಪ ಚುನಾವಣೆ ನಡೆಸಲು ಹೈಕೋರ್ಟ್ ನಿಂದ ಹಸಿರು ನಿಶಾನೆ

Spread the love

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ ಆಡಳಿತಾವಧಿ ಮುಕ್ತಾಯಗೊಂಡಿದ್ದು, ಪರಿಷತ್‌ಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಪುರಸ್ಕರಿಸಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಗುಮಗೇರಾದ ಶೇಖರಗೌಡ ಮಾಲಿಪಾಟೀಲ ಎನ್ನುವವರು, ಕನ್ನಡ ಸಾಹಿತ್ಯ ಪರಿಷತ್‌ಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ, ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ ಚುನಾವಣಾಧಿಕಾರಿಯನ್ನು ಎದುರುಗಾರರನ್ನಾಗಿ ಇಲ್ಲಿನ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು.
‘ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಶೇ 90ರಷ್ಟು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಚುನಾವಣೆ ಮುಂದೂಡುವಂತೆ ಸರ್ಕಾರ ಹೊರಡಿಸಿರುವ ಸುತ್ತೋಲೆ ಪ್ರಸ್ತುತ ಚುನಾವಣೆಗೆ ಅನ್ವಯವಾಗುವುದಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಪರಿಷತ್ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆಸಬೇಕು ಎಂದು ಶೇಖರಗೌಡ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ ಅವರಿದ್ದ ನ್ಯಾಯಪೀಠ, ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಆದೇಶದ ದಿನಾಂಕದಿಂದ 2 ತಿಂಗಳೊಳಗೆ ಪರಿಗಣಿಸಿ, ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.


Spread the love

Leave a Reply

error: Content is protected !!