gcsteam
September 23, 2022
categorize
75 Views
- ಸರ್ಕಾರ ನಡೆಸುವ ಸಂದರ್ಭದಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕೇ ಹೊರತು ಸುಖಾಸುಮ್ಮನೆ ಬೈಯುವುದು ಸಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಗದಿಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ದುಇ ಟೀಕೆ ಮಾಡುವಂತ ಕಾಲವಲ್ಲ. ಪರಿಸ್ಥಿತಿ ನಿಭಾಯಿಸುವಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ವಿಪಕ್ಷ ನಾಯಕರು ಸರ್ಕಾರಕ್ಕೆ ಅವುಗಳ ಬಗ್ಗೆ ಸಲಹೆ ಸೂಚನೆ ನೀಡಲಿ. ಅದನ್ನು ಬಿಟ್ಟು ದಿನಬೆಳಗಾದರೆ ಸರ್ಕಾರವನ್ನು ಬೈದರೆ ಏನು ಪ್ರಯೋಜನ ಎಂದು ಶೆಟ್ಟರ್ ಕಿಡಿಕಾರಿದರು.ರ್ಕಾಸರ ತಪ್ಪು ಮಾಡಿದ್ದೇ ಆದರೆ ಸಿದ್ಧರಾಮಯ್ಯನವರು ಸಲಹೆ ಸೂಚನೆಗಳನ್ನು ನೀಡಲಿ. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಜನ ಸುಮ್ಮನಿರುವುದಿಲ್ಲ ಎಂದು ಶೆಟ್ಟರ್ ತರಾಟೆಗೆ ತೆಗೆದುಕೊಂಡರು.ಸಚಿವ ಶ್ರೀರಾಮುಲು ಪ್ರಚಾರದ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ನಾನು ಒಬ್ಬ ಸಚಿವನಾಗಿ ಹೇಳುತ್ತಿದ್ದೇನೆ. ಇಂತಹ ಸಂದರ್ಭಗಳಲ್ಲಿ ನೂರಾರು ಜನರನ್ನು ಸೇರಿಸಿಕೊಂಡು ಪ್ರಚಾರ ಮಾಡುವುದು ಸರಿಯಲ್ಲ. ಸಚಿವರು ಇದನ್ನು ಕೈ ಬಿಟ್ಟು ಸರ್ಕಾರ ನಿರ್ದೇಶನವನ್ನು ಪಾಲಿಸಬೇಕು ಎಂದು ಮನವಿ ಮಾಡಿದರುಬ, ಡಿಕೆಶಿ ಚಿಲ್ಲರೆ ರಾಜಕಾರಣ ಬಿಡಲಿ: ಶೆಟ್ಟರ್ ಆಕ್ರೋಶ!ಕೋವಿಡ್ ಸಂಳದರ್ಭದಲ್ಲಿ ಮೂರು ಕ್ಷೇತ್ರದಲ್ಲಿ ಚುನಾವಣೆ ನಡೆಸಿದ ಕುರಿತು ಪ್ರತಿಕ್ರಿಯೆ ನೀಡಿದ ಶೆಟ್ಟರ್, ಚುನಾವಣೆ ನಡೆಸುವ ಸಂದರ್ಭದಲ್ಲಿ ಕೆಲವೊಮ್ಮೆ ಹಾಗೆಲ್ಲ ಆಗುತ್ತದೆ. ಚುನಾವಣೆಯೇ ಮುಖ್ಯ ಅಂತ ಅಲ್ಲ ಅದಕ್ಕೂ ಕೂಡ ಆದ್ಯತೆ ನೀಡಿ ಪರಿಸ್ಥಿತಿ ನಿಭಾಯಿಸಿದ್ದೇವೆ ಎಂದು ಸಮರ್ಥನೆ ನೀಡಿದರು.