Breaking News

ಕೋವಿಡ್ ಲಸಿಕಾಕರಣವನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ನೋಡಲ್ ಅಧಿಕಾರಿಗಳ ನೇಮಕ -ಜಿಲ್ಲಾಧಿಕಾರಿ ನಿತೇಶ ಪಾಟೀಲ

Spread the love

 

ಧಾರವಾಡ*: ಜಿಲ್ಲೆಯಲ್ಲಿ ಕೋವಿಡ್-19 2ನೇ ಅಲೆಯ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಈ ಸೋಂಕಿನಿಂದ ಉಂಟಾಗುವ ಅಸ್ವಸ್ಥತೆ ಮತ್ತು ಮರಣ ಪ್ರಮಾಣವನ್ನು ತಗ್ಗಿಸುವ ಸಲುವಾಗಿ ಕೋವಿಡ್ ಲಸಿಕಾಕರಣವನ್ನು ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ವಿವಿಧ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಲಘಟಗಿ ತಾಲೂಕಿಗೆ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ.ಬಿ ಅವರನ್ನು, ಧಾರವಾಡ ತಾಲೂಕಿಗೆ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿ ಶಿವಾನಂದ ಭಜಂತ್ರಿ ಅವರನ್ನು , ಹುಬ್ಬಳ್ಳಿ ನಗರಕ್ಕೆ ಹುಬ್ಬಳ್ಳಿ – ಧಾರವಾಡ ಸ್ಮಾರ್ಟ ಯೋಜನೆಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಅಜೀಜ್ ದೇಸಾಯಿ, ಹುಬ್ಬಳ್ಳಿ ಗ್ರಾಮೀಣ ತಾಲೂಕಿಗೆ ಕೃಷಿ ಇಲಾಖೆಯ ಉಪ ನಿರ್ದೇಶಕಿ ಆರ್ ಸ್ಮೀತಾ, ನವಲಗುಂದ ತಾಲೂಕಿಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಉಪ ನಿರ್ದೇಶಕಿ ಪ್ರೀತಿ ದೊಡಮನಿ, ಕುಂದಗೋಳ ತಾಲೂಕಿಗೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ ಅವರನ್ನು, ಅಳ್ನಾವರ ತಾಲೂಕಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎಸ್.ರುದ್ರೇಶ ಅವರನ್ನು, ಅಣ್ಣಿಗೇರಿ ತಾಲೂಕಿಗೆ ರಾಷ್ಟ್ರೀಯ ಹೆದ್ದಾರಿ 63 ವಿಶೇಷ ಭೂ ಸ್ವಾಧೀನಾಧಿಕಾರಿ ವಿದ್ಯಾಧರ ಗುಳಗುಳಿ ಅವರನ್ನು ನೇಮಿಸಲಾಗಿದೆ.
ನವಲಗುಂದ, ಅಣ್ಣಿಗೇರಿ ಪುರಸಭೆ ಹಾಗೂ ಅಳ್ನಾವರ, ಕಲಘಟಗಿ, ಕುಂದಗೋಳ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳನ್ನು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ನೇಮಿಸಲಾದ ನೋಡಲ್ ಅಧಿಕಾರಿಗಳು ತಮಗೆ ವಹಿಸಿದ ತಾಲೂಕುಗಳಿಗೆ ಪ್ರತಿದಿನ ಭೇಟಿ ನೀಡಿ ಲಸಿಕಾಕರಣ ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸನೇಕು. ತಾಲೂಕಿನ ಆರೋಗ್ಯ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಕೋವಿಡ್ ಲಸಿಕಾಕರಣ ಸ್ಥಿತಿಗತಿಯ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶದಲ್ಲಿ ತಿಳಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಎಂ ಆರ್ ಸಿ ವಾರಿಯರ್ಸ್ ತಂಡ ಚಾಂಪಿಯನ್

Spread the loveಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹಾಗೂ ವಿ ಎ ಕೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ …

Leave a Reply

error: Content is protected !!