Breaking News

ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿ

Spread the love

ಹುಬ್ಬಳ್ಳಿ:

ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಮಾ.1 ರಿಂದ 15 ರವರೆಗೆ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಪರಿವರ್ತನ ಸಮೂದಾಯದ ಸಂಚಾಲಕ ಎಸ್.ಆರ್.ಹಿರೇಮಠ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುದಿಲ್ಲ ಎಂದು ಪ್ರಧಾನಿಯವರು ಘೋಷಿಸಿದ್ದಾರೆ ಆದರೂ ಕೂಡಾ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮಾತ್ರ ಈ ಕಾಯಿದೆಗಳನ್ನು ರದ್ದುಗೊಳಸಿಲು ಹಿಂದೆಟ್ಡು ಹಾಕುತ್ತಿದೆ ಏಕೆ? ಮುಂದಿನ ದಿನಗಳಲ್ಲಿ ಈ ಕಾಯಿದೆಗಳನ್ನು ಅನುಷ್ಠಾನಗೊಳಿಸಿ ರೈತರಲ್ಲಿ ಅನ್ಯಾಯ ಮಾಡುವ ಹುನ್ನಾರ ರಾಜ್ಯ ಸರ್ಕಾರದ್ದು ಆಗಿದೆ ಎಂದು ಆರೋಪಿಸಿದರು.

ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮಹಾಮೈತ್ರಿಯು ಜಾಥಾ ಹಮ್ಮಿಕೊಂಡಿದ್ದು, ಮಾರ್ಚ್ 15 ಕ್ಕೆ ಬೆಂಗಳೂರಿನಲ್ಲಿ ಸಂಪನ್ನಗೊಳಲಿದೆ. ಈ ಮಧ್ಯೆ ಆಯಾ ಜಿಲ್ಲೆಯ ಶಾಸಕರಿಗೆ ಕಾಯಿದೆಯ ತಿಳುವಳಿಕೆ ಕರಪತ್ರಗಳನ್ನು ಹಂಚಿ ಅವರ ಪರ ಮತ್ತು ವಿರೋಧ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ. ಹುಬ್ಬಳ್ಳಿಯಲ್ಲಿ ಮಾ. 7 ರಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಮನೆಮುಂದೆ ಜಾಥಾ ನಡೆಸಿ ಅಭಿಪ್ರಾಯ ತಿಳಿದು ಕಾಯಿದೆಗಳನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲು ಒತ್ತಾಯಿಸುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿ ವ್ಹಿ.ಆರ್.ಪಾಟೀಲ್, ಎಮ್.ಸಿ.ಹಾವೇರಿ, ಎನ್.ಸಿ.ದೊಡ್ಡಮನಿ, ಎಸ್.ಎ.ಮುಕ್ಕಾಭಿ ಸೇರಿದಂತೆ ಮುಂತಾದವರು ಇದ್ದರು.


Spread the love

About Karnataka Junction

    Check Also

    ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಭಾರೀ ಗುಡುಗು ಸಿಡಿಲು ಮಿಶ್ರಿತ ಮಳೆ

    Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ವಿವಿಧೆಡೆ ಶನಿವಾರ ಸಂಜೆ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ …

    Leave a Reply

    error: Content is protected !!