ಬಹುಕೋಟಿ ಛಾಪಾ ಕಾಗದ ಹಗರಣ ಬೆಳಕಿಗೆ ತಂದಿದ್ದ ಜಯಂತ ತಿಣೈಕರ ಮೇಲೆ ಮಾರಣಾಂತಿಕ ಹಲ್ಲೆ.

Spread the love

ಬೆಳಗಾವಿ:ಬಹುಕೋಟಿ ಛಾಪಾ ಕಾಗದ ಹಗರಣ ಬೆಳಕಿಗೆ ತಂದು ಕರೀಂಲಾಲ್ ತೆಲಗಿ ಜೈಲಿಗೆ ಹೋಗಲು ಕಾರಣರಾಗಿದ್ದ ಸಾಮಾಜಿಕ ಕಾರ್ಯಕರ್ತ ಜಯಂತ ತಿಣೈಕರ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ.
ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದು ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂ ಉಳಿತಾಯ ಮಾಡಿ,ರಾಷ್ಟ್ರದ ಗಮನ ಸೆಳೆದಿದ್ದ ಖಾನಾಪೂರ ಮೂಲದ ಸಾಮಾಜಿಕ ಕಾರ್ಯಕರ್ತ ಜಯಂತ್ ತಿಣೈಕರ್ ಮೇಲೆ ಕೆಲವು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಈ ಘಟನೆ ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆ ವ್ಯಾಪ್ತಿಯ ಝಾಡ್ ಶಹಾಪೂರ ಬಳಿ ನಡೆದಿದೆ.
ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದ ಕೆಲವು ದುಷ್ಕರ್ಮಿಗಳು ಜಯಂತ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದು, ಜಯಂತ ತಿಣೈಕರ ಈಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಯಂತ ತಿಣೈಕರ್ ಅವರು ಅಂದಿನ ರಾಜ್ಯ ಡಿಜಿಪಿ ಎಚ್. ಟಿ. ಸಾಂಗ್ಲಿಯಾನಾ ಅವರನ್ನು ಭೇಟಿಯಾಗಿ, ಕರೀಂ ಲಾಲಾ ತೇಲಗಿ ನಡೆಸುತ್ತಿದ್ದ ನಕಲಿ ಛಾಪಾ ದಂಧೆಯ ಬಗ್ಗೆ ನಿಖರ ದೂರು ನೀಡಿದ್ದರು.
ದುಷ್ಕರ್ಮಿಗಳು ಅವರ ಮೇಲೆ ಅಟ್ಯಾಕ್ ಮಾಡಿದ್ದು ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply