https://youtu.be/Bz71CbqcG1Ehttps://youtu.be/Bz71CbqcG1E
ಬೆಂಗಳೂರು: ಜೂನ್ 4 ಹಾಗೂ 5ರಂದು ರಾಜ್ಯದ್ಯಾಂತ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ನಂತರ ತಾತ್ಕಾಲಿಕವಾಗಿ ಮಳೆಯ ಪ್ರಮಾಣ ಕುಂಠಿತವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಮುನ್ಸೂಚನೆಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಜೂನ್ 4ರಿಂದ 6ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 5ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 4, 5ರಂದು ವ್ಯಾಪಕ ಮಳೆಯಾಗಲಿದೆ. ಧಾರವಾಡ, ಹಾವೇರಿ, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಚಾಮರಾಜನಗರದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಜೂನ್ 4, 5ರಂದು ಕೊಡಗು, ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ.