Breaking News

ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ ಎಂದ ಸಚಿವ ಜಗದೀಶ್​ ಶೆಟ್ಟರ್​

Spread the love

ಹುಬ್ಬಳ್ಳಿ; ಅರುಣ್​ ಸಿಂಗ್ ಅವರು ಕ್ಲಿಯರ್ ಆಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಯಡಿಯೂರಪ್ಪ ಅವರು ಕೂಡ ಇನ್ನೂ ಎರಡು ವರ್ಷ ಸಿಎಂ ಆಗಿಯೇ ಇರ್ತೀನಿ ಅಂತ ಹೇಳಿದ್ದಾರೆ. ಇಲ್ಲಿ ಯಾವುದೇ ರೀತಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಿನ್ನೆಯಷ್ಟೇ ನಮ್ಮ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ, ಈಗ ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ಆದರೆ, ಕೆಲವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದಾರೆ. ಅವರು ಯಾಕೆ ಹೋಗಿದ್ದಾರೆ ಅದನ್ನು ಅವರೇ ಹೇಳಬೇಕು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.ಸಚಿವ ಜಗದೀಶ್ ಶೆಟ್ಟರ್ ಹೇಳಿಕೆನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಪುನರ್ ರಚನೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.


Spread the love

About Karnataka Junction

    Check Also

    ಲಯನ್ಸ್ ಪದಗ್ರಹಣ ಸಮಾರಂಭ ನಾಳೆ

    Spread the loveಲಯನ್ಸ್ ಪದಗ್ರಹಣ ಸಮಾರಂಭ ನಾಳೆ ಹುಬ್ಬಳ್ಳಿ: ಲಯನ್ಸ ಕ್ಲಬ್ ಆಫ್ ಹುಬ್ಬಳ್ಳಿ ಪರಿವಾರದ 2024-25ನೇ ಸಾಲಿನ ಪದಾಧಿಕಾರಿಗಳ …

    Leave a Reply

    error: Content is protected !!