ಹುಬ್ಬಳ್ಳಿ: ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದಿಂದ ಮಾಡಲಾದ ನಾಮನಿರ್ದೇಶನದಂತೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಅಧ್ಯಕ್ಷರಾದ ಸಂದೀಪ ಬೂದಿಹಾಳ ರವರು ಸದಸ್ಯರಾಗಿ ನೇಮಕವಾಗಿರುವುದು ಹೆಮ್ಮೆಯ ವಿಷಯವಾಗಿದೆ.
*ಸಂದೀಪ ಬೂದಿಹಾಳ ಪರಿಚಯ* ಸಂದೀಪ ಬೂದಿಹಾಳ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದವರು. ಪ್ರಸ್ತುತ ಹುಬ್ಬಳ್ಳಿಯ ಕನಕದಾಸ ಶಿಕ್ಷಣ ಸಂಸ್ಥೆಯ ವಿಜಯನಗರ ಪಿ.ಯು. ಕಾಲೇಜ್‌ನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲದೇ ಪ್ರಸ್ತುತ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಸರ್ಕಾರದ ಶಾಲಾ ದತ್ತು ನೀತಿ ಕಮೀಟಿ ಸದಸ್ಯರಾಗಿ ಕಾಯ೯ನಿವ೯ಹಿಸುತ್ತಿದ್ದಾರೆ. ಇವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅತ್ಯುತ್ತಮ ಪ್ರಾಚಾರ್ಯರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರು. ಪದವಿ ಪೂರ್ವ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಧಾರವಾಡ ಜಿಲ್ಲಾ ಪ್ರಾಚಾರ್ಯರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಶಿಕ್ಷಕರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆದಿರುವ ಹೋರಾಟದ ನೇತೃತ್ವ ವಹಿಸಿದ್ದಾರೆ ಎಂದು ಕೆ.ಆರ್‌ಎಂ.ಎಸ್.ಎಸ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಪಾಟೀಲ ತಿಳಿಸಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿದ್ದಕ್ಕೆ ಶ್ರೀಯುತರಿಗೆ ಕರ್ನಾಟಕ ರಾಜ್ಯದ ಶಿಕ್ಷಕ ವೃಂದದವರು ಶುಭಾಶಯಗಳನ್ನು ಕೋರಿದ್ದಾರೆ.
Check Also
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ
Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …