ಕುಂದಗೋಳ : ಕೇಂದ್ರ ಸರ್ಕಾರ ತೈಲ್ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕುಂದಗೋಳ ಪಟ್ಟಣದ ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತೈಲ್ ಬೆಲೆ ಏರಿಕೆಯಿಂದ ಶ್ರೀಸಾಮಾನ್ಯರ ಬದುಕು ದುಸ್ತರವಾಗಿದೆ. ಕರೋನಾದಂತಹ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಪದೇ ಪದೇ ತೈಲ್ ಬೆಲೆ ಏರಿಕೆ ಮಾಡಿ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ದೂರಿದರು.
ಈ ಕೂಡಲೇ ತೈಲ್ ಬೆಲೆಯನ್ನು ಇಳಿಕೆ ಮಾಡಬೇಕು. ಇಲ್ಲದಿದ್ದರಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದೂ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೀತ್ ಶಾ ವಿರುದ್ಧ ಕಿಡಿಕಾರಿದ ಕಾರ್ಯಕರ್ತರು, ಕೆಲಕಾಲ ಪೆಟ್ರೊಲ್ ಬಂಕನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
