ಹುಬ್ಬಳ್ಳಿ: ಶಾಸಕರಾದ ಅರವಿಂದ ಬೆಲ್ಲದ ಅವರು ಖಾಸಗಿ ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಈ ಬಗ್ಗೆ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಜಿಲ್ಲಾ ಬಿಜೆಪಿ ವಕ್ತಾರ ರವಿ ನಾಯಕ ಹೇಳಿದರು.
ಶಾಸಕರು ಹಾಗೂ ಧಾರವಾಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಅರವಿಂದ ಬೆಲ್ಲದ ಅವರು
ರಾಷ್ಟ್ರೀಯ ನಾಯಕರ ಭೇಟಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಹೋಗಿಲ್ಲ
ಖಾಸಗಿ ಕಾರ್ಯಕ್ರಮಕ್ಕೆ ಹೋಗಿದ್ದು ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ.
ಹೀಗಾಗಿ ನನ್ನ ದೆಹಲಿ.ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಶಾಸಕರಾದ ಅರವಿಂದ ಬೆಲ್ಲದ ಅವರೇ ತಿಳಿಸಿದ್ದಾರೆ ಎಂದರು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …