ಹುಬ್ಬಳ್ಳಿ: ನಗರದಲ್ಲಿ ನಡೆದ ಚಂದ್ರಶೇಖರ್ ಗುರೂಜಿಯ ಬರ್ಬರ ಕೊಲೆ ಪ್ರಕರಣ ಹಿನ್ನಲೆ ಗುರೂಜಿಯ ಆಪ್ತ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿಯನ್ನು ಗೋಕುಲ ರೋಡಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ.
ಪ್ರಕರಣದ ಶಂಕಿತ ಹಂತಕರು ಮಹಾಂತೇಶ ಶಿರೂರ ಮತ್ತು ಮಂಜುನಾಥ ದುಮ್ಮವಾಡ ಹಾಗೂ ಮಹಾಂತೇಶ ಪತ್ನಿ ವನಜಾಕ್ಷಿಯನ್ನು ವಶ ಪಡೆದುಕೊಂಡವರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ ಜೊತೆಗಿನ ಪೋಟೋ ಎಕ್ಸ್ ಲ್ಸೀವ್ ಪೋಟೋ ಕರ್ನಾಟಕ ಜಂಕ್ಷನ್ ಟಾಟ್ ಕಾಂಗೆ ಲಭ್ಯವಾಗಿವೆ. ಇನ್ನು ಮಹಾಂತೇಶ ಶಿರೂರ ಸಹ ತನ್ನ ಪೇಸ್ ಬುಕ್ ನಲ್ಲಿ ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನ ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು..
ಇನ್ನು ವಿಳಂಬವೇಕೆ ಭಗವಂತ, ಆದಷ್ಟು ಬೇಗಾ ಅವತರಿಸು ಪ್ರಭು! ಸಂಭವಾಮಿ ಯುಗೇ.. ಯುಗೇ…
ಎಂದು ಹಿಗೇ ಐದು ದಿನಗಳ ಹಿಂದೇಯಷ್ಟೇ ಪೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ಪಕ್ಕಾ ಪೂರ್ವ ನಿಯೋಜಿತ ಮತ್ತು ಚಂದ್ರಶೇಖರ ಸ್ವಾಮೀಜಿ ಮೇಲೆ ಎಷ್ಟೊಂದು ಧ್ಚೇಷ ಇತ್ತು ಎಂದು ಗೊತ್ತಾಗುತ್ತದೆ.
ಗುರೂಜಿಯ ಬರ್ಬರ ಕೊಲೆ ಬೇನಾಮಿ ಆಸ್ತಿಗಾಗಿ ನಡೆಯಿತಾ ಎಂದು ಅನುಮಾನ ವ್ಯಕ್ತವಾಗಿದ್ದು, ಆರೋಪಿ ವನಜಾಕ್ಷಿ ಸರಳವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದು, 2019ರವರೆಗೆ ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ಗುರೂಜಿ ವನಜಾಕ್ಷಿ ಹೆಸರಿಗೆ ಗೋಕುಲ ರಸ್ತೆ ಬಳಿಯ ಅಪಾರ್ಟ್‌ಮೆಂಟ್ ಮತ್ತು ಹಲವು ಆಸ್ತಿಗಳನ್ನು ನೋಂದಣಿ ಮಾಡಿಸಿದ್ದರು.
ಬಳಿಕ ಆಸ್ತಿ ವಾಪಸ್ ಕೇಳಿದಾಗ ಗಲಾಟೆ ಆರಂಭವಾಗಿತ್ತು. ಆಸ್ತಿ ಜೊತೆಗೆ ಹಣಕಾಸಿನ ವಿಚಾರವಾಗಿಯೂ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಚಂದ್ರಶೇಖರ್ ಗುರೂಜಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಬಂಧಿತ ವನಜಾಕ್ಷಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧ ಮಾತನಾಡಿದ ಹು-ಧಾ ಪೊಲೀಸ್ ಕಮಿಷನರ್ ಲಾಬೂರಾಮ್ ಆರೋಪಿಗಳ ಪತ್ತೆಗೆ ಎಸಿಪಿ ನೇತೃತ್ವದಲ್ಲಿ 5ತಂಡ ರಚನೆ ಮಾಡಲಾಗಿದೆ. ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹುಬ್ಬಳ್ಳಿ-ಧಾರವಾಡ ಸುತ್ತಲೂ ನಾಕಾ ಬಂಧಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …